ಪುನೀತರಾಜಕುಮಾರ್‌ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ: ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ಪುನೀತ್ ರಾಜ್​ಕುಮಾರ್​ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಇಂದು ಕರ್ನಾಟಕ ಫಿಲ್ಮ್ ಚೇಂಬರ್ ಆಯೋಜಿಸಿದ್ದ ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗುವುದು ಹಾಗೂ ಅಪ್ಪು ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು … Continued

ಹೈದರಾಬಾದ್‌: ಟಾಲಿವುಡ್ ನಟಿ ಶಾಲು ಚೌರಾಸಿಯಾ ಮೇಲೆ ಹಲ್ಲೆ, ದರೋಡೆ

ಹೈದರಾಬಾದ್: ಟೋನಿ ಬಂಜಾರಾ ಹಿಲ್ಸ್‌ನ ಕೆಬಿಆರ್ ಪಾರ್ಕ್ ಬಳಿ ಭಾನುವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ದಾಳಿಯಿಂದ ಟಾಲಿವುಡ್ ನಟಿ ಶಾಲು ಚೌರಾಸಿಯಾ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ 8.30ರ ಸುಮಾರಿಗೆ ಅಡ್ಡಾಡುತ್ತಿದ್ದಾಗ ಯುವ ನಟಿ ಮೇಲೆ ಹಲ್ಲೆ ನಡೆಸಿ ಅವರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ. ವ್ಯಕ್ತಿ ಮೊದಲು ತನ್ನ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ಕೊಡುವಂತೆ ಕೇಳಿದ್ದಾನೆ … Continued

ರಸ್ತೆ ಅಪಘಾತದಲ್ಲಿ ಬಾಲಿವುಡ್‌ ನಟ ಸುಶಾಂತ್​ ಸಿಂಗ್‌ ರಜಪೂತ್‌ 6 ಸಂಬಂಧಿಗಳ ಸಾವು ; ನಾಲ್ವರ ಸ್ಥಿತಿ ಗಂಭೀರ

ನವದೆಹಲಿ : ಬಿಹಾರದ ಲಖಿಸರಾಯ್ ಎಂಬಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರ ಐವರು ಸಂಬಂಧಿಗಳು ಸೇರಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದಾರೆ. ವರದಿಯ ಪ್ರಕಾರ, ಸಿಕಂದರಾ-ಶೇಖ್‌ಪುರ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 333 ರಲ್ಲಿ ಅವರು ಪ್ರಯಾಣಿಸುತ್ತಿದ್ದ ಎಸ್‌ಯುವಿ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್‌ಗೆ … Continued

ಜನ್ಮದಿನ ಪ್ರವಚನ ಮಾಡುತ್ತಲೇ ವಿಧಿವಶರದಾದ ಸ್ವಾಮೀಜಿ

ಬೆಳಗಾವಿ: ಗೋಕಾಕ ತಾಲೂಕಿನ ಬಳೋಬಾಳ ಗ್ರಾಮದ ಸ್ವಾಮಿಗಳು ತಮ್ಮ ಜನ್ಮದಿನತ್ತ ಪ್ರವಚನ ಮಾಡುತ್ತಿರುವಾಗಲೇ ವೇದಿಕೆ ಮೇಲೆ‌ ಕುಸಿದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನವೆಂಬರ್ 6ರಂದು ಈ ಘಟನೆ ನಡೆದಿದ್ದು, ಅದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಳೋಬಾಳ ಗ್ರಾಮದ‌ ಬಸವಯೋಗ ಮಂಟಪ ಟ್ರಸ್ಟ್ ನ ಬಳೋಬಾಳ ಮಠದ ಶ್ರೀ ಸಂಗನಬಸವ ಸ್ವಾಮೀಜಿ … Continued

ಆಘಾತಕಾರಿ ಘಟನೆ…10 ತಿಂಗಳ ಹಸುಳೆ ಮೇಲೆ ಮನೆಕೆಲಸದವನಿಂದ ಅತ್ಯಾಚಾರ..!

ಲಕ್ನೋ: ಆಘಾತಕಾರಿ ಘಟನೆಯೊಂದರಲ್ಲಿ, ಮನೆಯ ಕೆಲಸದನಿಂದ ಹತ್ತು ತಿಂಗಳ ಮಗುವಿನ ಮೇಲೆ ಅತ್ಯಾಚಾರ ನಡೆದ ಘಟನೆ ಬೆಳಕಿಗೆ ಬಂದಿದೆ. ಮಗುವನ್ನು ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ (ಕೆಜಿಎಂಯು) ಪೀಡಿಯಾಟ್ರಿಕ್ ಸರ್ಜರಿ ವಿಭಾಗಕ್ಕೆ ದಾಖಲಿಸಲಾಗಿದೆ. ಮಗುವಿನ ಖಾಸಗಿ ಅಂಂಆಂಗಗಳಿಗೆ ಹಾನಿಯಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಭಾನುವಾರ ರಾತ್ರಿ ಸಾದತ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. … Continued

ಕಾಂಗ್ರೆಸ್‌ ಕಾರ್ಯಕರ್ತರಿಂದ ನಾಥೂರಾಮ್ ಗೋಡ್ಸೆ ಪ್ರತಿಮೆ ಧ್ವಂಸ !

ಅಹ್ಮದಾಬಾದ್‌: ಗುಜರಾಥಿನ ಜಾಮ್‌ ನಗರದಲ್ಲಿ ಸ್ಥಾಪಿಸಿದ್ದ ಮಹಾತ್ಮಾ ಗಾಂಧಿ ಹತ್ಯೆ ಮಾಡಿದ ನಾಥೂರಾಮ್ ಗೋಡ್ಸೆ ಪ್ರತಿಮೆಯನ್ನು ಗುಜರಾತಿನ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ ಧ್ವಂಸಗೊಳಿಸಿದ್ದಾರೆ. ಇಂದು ಬೆಳಗ್ಗೆ ಜಾಮ್ ನಗರದ ಕಾಂಗ್ರೆಸ್ ಅಧ್ಯಕ್ಷ ದಿಗುಭಾ ಜಡೇಜಾ ಹಾಗೂ ಅವರ ಸಹಚರರು ಸೇರಿ ಧ್ವಂಸಗೊಳಿಸಿದ್ದಾರೆ. ಅಲ್ಲದೆ ಧ್ವಂಸಗೊಳಿಸುತ್ತಿರುವ ವೇಳೆಯಲ್ಲಿ ಕಾರ್ಯಕರ್ತರೆಲ್ಲರು ಅದರ ಮೇಲೆ ಕೇಸರಿ ಬಣ್ಣದ ಬಟ್ಟೆ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ರಿಯಲ್ ಎಸ್ಟೇಟ್ ಗ್ರೂಪ್ ಐಆರ್​​ಇಒ ವ್ಯವಸ್ಥಾಪಕ ನಿರ್ದೇಶಕ ಲಲಿತ್ ಗೋಯಲ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್​​ಇಒ(Ireo) ಗ್ರೂಪ್‌ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಲಲಿತ್ ಗೋಯಲ್ ಅವರನ್ನು ಜಾರಿ ನಿರ್ದೇಶನಾಲಯ ಮಂಗಳವಾರ ಬಂಧಿಸಿದೆ. ನಾಲ್ಕು ದಿನಗಳ ವಿಚಾರಣೆಯ ನಂತರ ಗೋಯಲ್ ಅವರನ್ನು ಬಂಧಿಸಲಾಯಿತು. 2010 ರಿಂದ ಕಂಪನಿಯ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ (FEMA) ಉಲ್ಲಂಘನೆ ಪ್ರಕರಣವನ್ನು ಇಡಿ ತನಿಖೆ ನಡೆಸುತ್ತಿದೆ. … Continued

ಸುರತ್ಕಲ್: ನೈತಿಕ ಪೊಲೀಸ್ ಗಿರಿ, ಆರು ಜನ ಆರೋಪಿಗಳ ಬಂಧನ

ಮಂಗಳೂರು: ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅನ್ಯ ಧರ್ಮದ ಯುವಕ – ಯುವತಿಯನ್ನು ತಡೆದು ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿರುವ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ಯುವತಿಯ ಅಪಾರ್ಟ್ ಮೆಂಟ್ ಖಾಲಿ ಮಾಡುತ್ತಿದ್ದುದರಿಂದ ಲಗೇಜ್ ಶಿಫ್ಟ್ ಮಾಡಿ ಯುವಕ ಯುವತಿಯನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರನ್ನು 5-6 ಜನರ ಗುಂಪು ಫಾಲೋ ಮಾಡಿದೆ. … Continued

ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದ್ದು ರಾವಣನೇ?: ಶ್ರೀಲಂಕಾದಿಂದ ಸಂಶೋಧನೆ ಆರಂಭ. ಭಾರತಕ್ಕೂ ಆಹ್ವಾನ..!

ರಾಮಾಯಣದಲ್ಲಿ ಲಂಕಾಧಿಪತಿ ರಾವಣ ಪುಷ್ಪಕ ವಿಮಾನದಲ್ಲಿ ಬಂದು ಸೀತೆಯನ್ನು ಅಪಹರಿಸುವ ಕತೆಯಿದೆ. ಹೀಗಾಗಿ ಜಗತ್ತಿನಲ್ಲಿ ಮೊಟ್ಟ ಮೊದಲು ವಿಮಾನ ಹಾರಿಸಿದವನು ರಾವಣ ಎಂದು ಶ್ರೀಲಂಕಾ ನಂಬುತ್ತದೆ ಅಷ್ಟೇ ಅಲ್ಲ, ಇದೀಗ ಈ ಕುರಿತು ವೈಜ್ಞಾನಿಕ ಅಧ್ಯಯನ ನಡೆಸಲು ನಿರ್ಧರಿಸಿದೆ. ಆತ ಐದು ಸಾವಿರ ವರ್ಷಗಳ ಹಿಂದೆ ವಿಮಾನ ಹಾರಿಸಿದ್ದಾರೆ ಎಂಬ ಕಲ್ಪನೆಯೊಂದಿಗೆ ಹೊಸ ಸಂಶೋಧನೆ ಈಗಾಗಲೇ … Continued

ಭಾರತದಲ್ಲಿ 8,865 ಹೊಸ ಕೋವಿಡ್ -19 ಪ್ರಕರಣಗಳು ದಾಖಲು, ಇದು 287 ದಿನಗಳಲ್ಲೇ ಕಡಿಮೆ ದೈನಂದಿನ ಪ್ರಕರಣ

ನವದೆಹಲಿ: ಕಳೆದ 24 ಗಂಟೆಗಳಲ್ಲಿ 8,865 ಹೊಸ ಪ್ರಕರಣಗಳೊಂದಿಗೆ ಮಂಗಳವಾರ ಕೋವಿಡ್ -19 ಪ್ರಕರಣಗಳಲ್ಲಿ ಭಾರತವು ಪ್ರಮುಖ ಇಳಿಕೆ ಕಂಡಿದೆ, ಇದು 287 ದಿನಗಳಲ್ಲಿ ಅತಿ ಕಡಿಮೆ ದೈನಂದಿನ ಪ್ರಕರಣವಾಗಿದೆ. ಇಂದು ವರದಿಯಾದ ಹೊಸ ಪ್ರಕರಣಗಳು ನಿನ್ನೆಗಿಂತ 13.3% ಕಡಿಮೆಯಾಗಿದೆ. ಇದು ಭಾರತದ ಒಟ್ಟು ಪ್ರಕರಣವನ್ನು 3,44,56,401 ಕ್ಕೆ ಒಯ್ದಿದೆ. ಕಳೆದ 24 ಗಂಟೆಗಳಲ್ಲಿ 197 … Continued