ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಮತ್ತು ನಾಳೆ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.
ಅಲ್ಲದೆ, ಕೊಡಗು, ಮೈಸೂರು, ತುಮಕೂರು , ದಾವಣಗೆರೆ , ಚಿತ್ರದುರ್ಗ , ಚಾಮರಾಜನಗರ , ಚಿಕ್ಕಮಗಳಲೂರು , ಹಾಸನ , ಶಿವಮೊಗ್ಗ ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಮುನ್ಸೂಚನೆ ಇದೆ.  ಬಂಗಾಳಕೊಲ್ಲಿಯಲ್ಲಿ  ವಾಯುಭಾರ ಕುಸಿತವಾಗಿದೆ. ಬೆಂಗಳೂರು ನಗರ, ಕೋಲಾರ, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆ ಮುನ್ಸೂಚನೆ ಇದೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement