ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ಜಂಟಿ ಪಡೆ ಬುಧವಾರ ಎರಡು ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಐವರು ಭಯೋತ್ಪಾದಕರನ್ನು ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಪೊಂಬೆ ಮತ್ತು ಗೋಪಾಲ್ಪೋರಾ ಪ್ರದೇಶಗಳಲ್ಲಿ ಭಯೋತ್ಪಾದಕರನ್ನು ಕೊಲ್ಲಲಾಯಿತು.ಗೋಪಾಲ್ಪೋರಾ ಎನ್ಕೌಂಟರ್ನಲ್ಲಿ ಉಗ್ರಗಾಮಿ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಕಮಾಂಡರ್ ಅಫಾಕ್ ಸಿಕಂದರ್ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಪೊಂಬೆ ಮತ್ತು ಗೋಪ್ಲಾಪೋರಾದಲ್ಲಿ ಬುಧವಾರ ಮುಂಜಾನೆ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯ ಎರಡು ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ ಎಂದು ಬೆಳವಣಿಗೆಯ ಬಗ್ಗೆ ತಿಳಿದಿರುವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಗಳು ಎನ್ಕೌಂಟರ್ಗೆ ತಿರುಗಿದವು ಮತ್ತು ಅವರು ಪ್ರತಿದಾಳಿ ನಡೆಸಿದರು ಎಂದು ಅಧಿಕಾರಿ ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ