ರಾಜ್ಯದ ಮಿನಿವಿಧಾನಸೌಧಗಳ ಹೆಸರು ಬದಲಾಯಿಸಿದ ರಾಜ್ಯ ಸರ್ಕಾರ: ಇನ್ಮುಂದೆ ಅದು ತಾಲ್ಲೂಕು ಆಡಳಿತ ಸೌಧ

ಬೆಂಗಳೂರು: ರಾಜ್ಯದ ಕಂದಾಯ ಇಲಾಖೆಯ ತಾಲೂಕು ಮಟ್ಟದ ಮಿನಿವಿಧಾನಸೌಧದ ಕಟ್ಟಡಗಳಿದ್ದ ಮಿನಿವಿಧಾನಸೌಧದ ಹೆಸರನ್ನು ರಾಜ್ಯ ಸರ್ಕಾರ ಬದಲಾಯಿಸಿದ್ದು, ಈಗ ತಾಲೂಕು ಆಡಳಿತ ಸೌಧ ಎಂದು ಹೆಸರಿಡಲಾಗಿದೆ.
ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಜಯಲಕ್ಷ್ಮೀ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ತಾಲೂಕು ಮಟ್ಟದಲ್ಲಿ ಕಂದಾಯ ಇಲಾಖೆಯನ್ನೊಳಗೊಂಡಂತೆ ಇತರೆ ಸರ್ಕಾರಿ ಕಚೇರಿಗಳು ( Taluk Office ) ಮಿನಿವಿಧಾನಸೌಧದ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ರಾಜ್ಯದ ಎಲ್ಲ ತಾಲೂಕುಗಳಲ್ಲಿರುವ ಮಿನಿವಿಧಾನಸೌಧ ಎಂಬ ತಾಲೂಕು ಆಡಳಿತ ಕಚೇರಿಗಳನ್ನು ರಾಜ್ಯದ ಭಾಷಾನೀತಿಗೆ ಒಳಪಡುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆ ಕನ್ನಡವಾಗಿರುವುದರಿಂದ ನಾಡು-ನುಡಿ ಸಂಸ್ಕೃತಿಗೆ ಪೂರಕವಾಗಿ ತಾಲೂಕು ಆಡಳಿತ ಸೌಧ ಎಂದು ಬದಲಿಸುವುದು ಸೂಕ್ತವೆಂದು ತಿಳಿಸಲಾಗಿದೆ.
ಪ್ರಸ್ತುತ ಇರುವ ಮಿನಿ ಎಂಬ ಪದ ಆಂಗ್ಲ ಭಾಷೆಯಾಗಿದ್ದು, ತಾಲೂಕು ಮಟ್ಟದ ಆಡಳಿತ ಕಟ್ಟಡಗಳಲ್ಲಿ ಯಾವುದೇ ಕಲಾಪಗಳನ್ನಾಗಲಿ, ಕಾಯಿದೆ ಕಾನೂನುಗಳನ್ನಾಗಲಿ ರೂಪಿಸುವ ಶಕ್ತಿ ಕೇದ್ರಗಳಲ್ಲದ ಕಾರಣ, ಮಿನಿವಿಧಾನಸೌಧ ಎಂಬುದರ ಬದಲಾಗಿ, ತಾಲೂಕು ಆಡಳಿತ ಸೌಧ ಎಂದು ಬದಲಿಸುವುದು ಅರ್ಥಪೂರ್ಣವಾಗಿರುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸಾರ್ವಜನಿಕರು ಮತ್ತು ಗಣ್ಯರು ವ್ಯಕ್ತಿಗಳು ಕೋರಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಸ್ತುತ ರಾಜ್ಯದ ತಾಲೂಕುಗಳಲ್ಲಿರುವ ಮಿನಿ ವಿಧಾನಸೌಧ ಎಂಬ ನಾಮಾಂಕಿತದ ಬದಲು, ತಾಲೂಕು ಆಡಳಿತ ಸೌಧ ಎಂದು ನಾಮಾಂಕಿತಗೊಳಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳುವಂತೆ ಸಕ್ಷಮ ಪ್ರಾಧಿಕಾರಗಳಿಗೆ ಈ ಮೂಲಕ ಸೂಚಿಸಲಾಗಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement