ಚೆನ್ನೈ: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಕೊಯಮತ್ತೂರಿನಲ್ಲಿ 31 ವರ್ಷದ ಭೌತಶಾಸ್ತ್ರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರಿನ ಶಾಲೆಯಲ್ಲಿ ಭೌತಶಾಸ್ತ್ರದ ಶಿಕ್ಷಕರೊಬ್ಬರು 12ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈಗ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಅದು ಅಲ್ಲದೇ ಬಾಲಕಿಯ ದೂರಿನ ಮೇರೆಗೆ ಕ್ರಮಕೈಗೊಳ್ಳದ ಖಾಸಗಿ ಶಾಲೆಯ ಮುಖ್ಯಾಧ್ಯಾಪಕಿಯನ್ನೂ ಪೊಲೀಸರು ಬಂಧಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿಯೊಬ್ಬರು, ಈ ವರ್ಷದ ಮೊದಲಾರ್ಧದಲ್ಲಿ ಲೈಂಗಿಕ ದೌರ್ಜನ್ಯ ನಡೆದಿರುವಂತೆ ತೋರುತ್ತಿದೆ. ಶಿಕ್ಷಕರ ವಾಟ್ಸಾಪ್ ಚಾಟ್‍ನ ಆಡಿಯೊ ಸಂಭಾಷಣೆ ವೈರಲ್ ಆದ ಬಳಿಕ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು. ಆಡಿಯೋ ಚಾಟ್‌ಗಳನ್ನು ಪರಿಶೀಲನೆ ನಡೆಸಿರುವ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ. ಕೆ. ಸ್ಟಾಲಿನ್ ಘಟನೆ ಕುರಿತು ಹೇಳಿಕೆ ನೀಡಿದ್ದು, ಕೆಲವರ ವಿಕೃತಿಯು ವಿದ್ಯಾರ್ಥಿಯ ಜೀವನ ಕಸಿದುಕೊಂಡಿದೆ. ಶಾಲೆಗಳಲ್ಲಿ ಲೈಂಗಿಕ ಕಿರುಕುಳವಾಗದಂತೆ ನೋಡಿಕೊಳ್ಳಬೇಕು. ನಾವು ಅಪರಾಧಿಗಳನ್ನು ಕಾನೂನಿನ ಮುಂದೆ ನಿಲ್ಲಿಸುತ್ತೇವೆ ಮತ್ತು ಮಹಿಳೆಯರ ಸುರಕ್ಷತೆಯನ್ನು ನೋಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ