ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನ

ಬೆಂಗಳೂರು : ವ್ಯಕ್ತಿಯೊಬ್ಬರು ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನಂದಕುಮಾರ್ (50) ಎಂದು ಗುರುತಿಸಲಾಗಿದೆ. ವಿಧಾನಸೌಧದ 2ನೇ ಮಹಡಿಯ ಪ್ರವೇಶ ದ್ವಾರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಆರ್ ಟಿ ನಗರ ಮೂಲದ ವ್ಯಕ್ತಿ ನಂದಕುಮಾರ್ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೆ ಯತ್ನಿಸಲು ನಿಖರವಾದ ಕಾರಣ ಏನೆಂಬುದು ತಿಳಿದು ಬಂದಿಲ್ಲ.

0 / 5. 0

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement