ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಬುಧವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು, ಎರಡು ಫ್ಲಾಟ್ ಗಳಿಗೆ ಬೆಂಕಿ ಹೊತ್ತಿಕೊಂಡಿದೆ.
ಬೆಂಗಳೂರಿನ ಎಲೆಕ್ಟ್ರಾನ್ ಸಿಟಿಯ ವಸುಂಧರ ಲೇಔಟ್‌ನಲ್ಲಿರುವ ವಿ ಮ್ಯಾಕ್ಸ್‌ನಲ್ಲಿ ಈ ಅವಘಡ ನಡೆದಿದೆ. ಬೆಂಕಿ ಎರಡು ಫ್ಲ್ಯಾಟ್ಗಳಿಗೆ ವ್ಯಾಪಿಸಿದೆ ಎಂದು ವರದಿಗಳು ತಿಳಿಸಿವೆ.ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಜನರು ಹೊರಗೆ ಓಡಿ ಬಂದಿದ್ದು, ಇದುವರೆಗೆ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ.
ಸ್ಥಳಕ್ಕೆ ಹೆಬ್ಬಳಗೋಡ ಪೊಲೀಸ್ ಠಾಣೆ ಸಿಬ್ಬಂದಿ ಆಗಮಿಸಿದ್ದು, ಮನೆಯಲ್ಲಿ ಸಿಲುಕಿಕೊಂಡಿದ್ದ ವೃದ್ಧೆಯನ್ನು ಹೊರ ತರಲಾಗಿದೆ ಎನ್ನಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ