ನಡುರಾತ್ರಿ ರೈಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ಚಲಿಸುವ ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟಿದ್ದು, ಶ್ರೀರಂಗಪಟ್ಟಣದಲ್ಲಿ ಶವ ಪತ್ತೆಯಾಗಿದೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಅಣ್ಣೆಚಕ್ಕನಹಳ್ಳಿಯ ಅಭಿಷೇಕ್ (೧೯) ಮೃತ ಯುವಕ ಎಂದು ಗುರುತಿಸಲಾಗಿದೆ. ಗಾಂಧಿನಗರದ ಬಾರ್ ಒಂದರಲ್ಲಿ ರೆಸ್ಟೊರೆಂಟ್‌ನಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ನ.೬ರಂದು ರಾತ್ರಿ ಸ್ನೇಹಿತರ ಜೊತೆ ಮಂಡ್ಯಕ್ಕೆ ತೆರಳಲು ಮೆಜೆಸ್ಟಿಕ್‌ನಲ್ಲಿ ರೈಲು ಹತ್ತಿದ್ದರು. ರಾತ್ರಿ ಎರಡು ಗಂಟೆ ಸುಮಾರಿಗೆ ರೈಲಿನ ಬಾಗಿಲಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ರೈಲಿನಿಂದ ಕಾಣೆಯಾಗಿದ್ದಾನೆ.
ಈ ವಿಚಾರ ತಿಳಿದ ಆತನ ಸ್ನೇಹಿತರು ಪಾಂಡವಪುರ ಬಳಿ ಒಂದಷ್ಟು ಹುಡುಕಾಟ ನಡೆಸಿದ್ದು ಎಲ್ಲಿಯೂ ಆತ ಪತ್ತೆಯಾಗಿರಲಿಲ್ಲ.
ಬಳಿಕ ಸ್ನೇಹಿತರು ಅಭಿಷೇಕ್ ಸಂಬಂಧಿಕರಿಗೆ ಈ ಕುರಿತು ಮಾಹಿತಿ ನೀಡಿದ್ದು ಸಂಬಂಧಿ ಅಭಿಷೇಕ್ ಕಾಣೆಯಾಗಿದ್ದಾನೆಂದು ಉಪ್ಪಾರಪೇಟೆಯಲ್ಲಿ ದೂರು ದಾಖಲಿಸಿದ್ದರು.ತನಿಖೆ ಆರಂಭಿಸಿದ ಪೊಲೀಸರು ಸ್ನೇಹಿತರನ್ನು ವಿಚಾರಿಸಿದಾಗ ರೈಲಿನಲ್ಲಿ ತೆರಳುತ್ತಿದ್ದ ಬಗ್ಗೆ ತಿಳಿದು ಬಂದಿದೆ.
ಮಂಡ್ಯ ಪೊಲೀಸರು ಮತ್ತು ಅಗ್ನಿಶಾಮಕ ರಕ್ಷಣಾ ಸಿಬ್ಬಂದಿ ನಿರಂತರ ಹುಡುಕಾಟ ನಡೆಸಿದ್ದು, ಈಗ ಶ್ರೀರಂಗಪಟ್ಟಣದ ಬಳಿ ಇರುವ ನದಿಯಲ್ಲಿ ಅಭಿಷೇಕ್ ಮೃತದೇಹ ಪತ್ತೆಯಾಗಿದೆ.
ಮೃತ ಅಭಿಷೇಕ್ ರೈಲು ಕಂಬಿ ಹಿಡಿದು ಫೋಟೊ ತೆಗೆದುಕೊಳ್ಳುವಾಗ ಬ್ರಿಡ್ಜ್‌ಗೆ ಡಿಕ್ಕಿಯಾಗಿ ನದಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement