ನಾಲ್ಕು ದಿನಗಳ ಬಿಜೆಪಿ ಜನಸ್ವರಾಜ್ ಯಾತ್ರೆ ಆರಂಭ

posted in: ರಾಜ್ಯ | 0

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯ ಗೆಲುವಿನ ಮೇಲೆ ಕಣ್ಣಿಟ್ಟಿರುವ ಬಿಜೆಪಿ, ಗುರುವಾರ(ನ.18)ದಿಂದ ರಾಜ್ಯಾದ್ಯಂತ ಜನಸ್ವರಾಜ್ ಯಾತ್ರೆ ಆರಂಭಿಸಿದೆ. 4 ತಂಡಗಳಲ್ಲಿ ಬಿಜೆಪಿ ನಾಯಕರು ರಾಜ್ಯಾದ್ಯಂತ ಜನ ಸ್ವರಾಜ್ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಮುಖಂಡರ ತಂಡ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಿಂದ ಜನಸ್ವರಾಜ್ ಯಾತ್ರೆ ಆರಂಭಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲು ನೇತೃತ್ವದ ತಂಡ ಕೊಪ್ಪಳದಿಂದ ಆರಂಭಿಸಿದೆ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದ ತಂಡ ದಾವಣಗೆರೆಯಿಂದ ಹಾಗೂ ಸಚಿವ ಕೆ.ಎಸ್ ಈಶ್ವರಪ್ಪ ನೇತೃತ್ವದ ತಂಡ ಶಿವಮೊಗ್ಗದಿಂದ ಜನಸ್ವರಾಜ್ ಯಾತ್ರೆ ಆರಂಭಿಸಿದೆ.
ಈ ಜನಸ್ವರಾಜ್ ಯಾತ್ರೆ ನ. 21ರ ವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಪ್ರವಾಸ ಮಾಡಲಿದ್ದು, ಪಕ್ಷದ ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದೆ.
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ಡಿ.10 ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಕನಿಷ್ಠ 18 ರಿಂದ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡು ಬಿಜೆಪಿ ಈ ಯಾತ್ರೆ ನಡೆಸುತ್ತಿದೆ. ವಿಧಾನ ಪರಿಷತ್ ಚುನಾವಣೆಯ ಪ್ರಚಾರದ ಜತೆಗೆ ಬೂತ್ ಮಟ್ಟದಲ್ಲಿ ಪಕ್ಷದ ಬಲವರ್ಧನೆ ಮಾಡುವುದು ಈ ಯಾತ್ರೆಯ ಉದ್ದೇಶವಾಗಿದೆ. ಈ ಯಾತ್ರೆಯಲ್ಲಿ ಕೇಂದ್ರದ ಸಚಿವರು, ರಾಜ್ಯದ ಸಚಿವರು, ಶಾಸಕರು, ಸಂಸದರು ಹಾಗೂ ಪ್ರಮುಖ ಮುಖಂಡರು ಪಾಲ್ಗೊಂಡಿದ್ದಾರೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಇಂದಿನ ಪ್ರಮುಖ ಸುದ್ದಿ :-   "ನಾನು ನಿರೀಕ್ಷಿಸಿರಲಿಲ್ಲ...": ನೂತನ ಸಂಸತ್ತಿನ ಉದ್ಘಾಟನೆಗೆ ಸಾಕ್ಷಿಯಾಗಿದ್ದಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement