ಉಪ್ಪಿಟ್ಟು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥ..ಉಪ್ಪಿಟ್ಟಿನಲ್ಲಿ ಹಾವಿನಮರಿ ಪತ್ತೆ..!

ಯಾದಗಿರಿ : ಬೆಳಿಗ್ಗೆ ಉಪ್ಪಿಟ್ಟು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಇಂದು (ಗುರುವಾರ) ಬೆಳಿಗ್ಗೆ ಉಪಾಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಇರುವುದು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸುದ್ದಿ ಹೊರಬಿದ್ದ ನಂತರ ವಿದ್ಯಾರ್ಥಿಗಳು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಿರಿಯ ಅಧಿಕಾರಿಗಳು ಘಟನ ಸ್ಥಳಕ್ಕೆ ಆಗಮಿಸಿದ್ದಾರೆ.
ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. . ಉಪ್ಪಿಟ್ಟಿನಲ್ಲಿ ಹಾವಿನ ಮರಿ ಹೇಗೆ ಬಂತು ಎಂಬುದು ಇನ್ನೂ ಗೊತ್ತಾಗಬೇಕಿದೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement