ಕ್ರಿಪ್ಟೋ ಕರೆನ್ಸಿ ತಪ್ಪು ಕೈಗಳಿಗೆ ಹೋಗದಂತೆ ಖಚಿತ ಪಡಿಸಿಕೊಳ್ಳಬೇಕು: ಜಾಗತಿಕ ನಾಯಕರಿಗೆ ಕರೆ ನೀಡಿದ ಪ್ರಧಾನಿ ಮೋದಿ

ನವದೆಹಲಿ: ದೇಶಾದ್ಯಂತ ಭಾರೀ ಸದ್ದು ಮಾಡುತ್ತಿರುವ ಬಿಟ್ ಕಾಯಿನ್, ಕ್ರಿಪ್ಟೋ ಕರೆನ್ಸಿಯ ಬಗ್ಗೆ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ ಡಿಜಿಟಲ್ ಕರೆನ್ಸಿಯಲ್ಲಿ ಲಕ್ಷಾಂತರ ಭಾರತೀಯರು ವಿದೇಶಗಳಲ್ಲಿ ಮಾಡಿದ ಹೂಡಿಕೆ ನಿರ್ವಹಿಸಲು ಮತ್ತು ಮೇಲ್ವಿಚಾರಣೆಗೆ ಅಗತ್ಯವಿರುವ ನಿಯಂತ್ರಣದ ಚೌಕಟ್ಟು ರೂಪಿಸುವ ಸಂಬಂಧ ಗಂಭೀರವಾಗಿ ಪರಿಗಣಿಸಲಾಗುತ್ತಿದೆ. ಯಾಕೆಂದರೆ ಕ್ರಿಪ್ಟೋ ಕರೆನ್ಸಿ ತಪ್ಪು ಕೈಗಳಿಗೆ ಹೋಗದಂತೆ ಖಚಿತಪಡಿಸಿಕೊಳ್ಳ ಬೇಕಿದೆ ಎಂದು ಹೇಳಿದ್ದಾರೆ.
ಕ್ರಿಪ್ಟೋಕರೆನ್ಸಿ “ನಮ್ಮ ಯುವಕರನ್ನು ಹಾಳುಮಾಡುತ್ತಿದ್ದು. ಇದರ ವಿರುದ್ದ ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ಜಾಗತಿಕ ನಾಯಕರಿಗೆ ಕರೆ ನೀಡಿದ್ದಾರೆ.
ಸಿಡ್ನಿ ಸಂವಾದದಲ್ಲಿ ಪ್ರಧಾನ ಭಾಷಣ ಮಾಡಿದ ಅವರು, ಈ ನಿಟ್ಟಿನಲ್ಲಿ “ಪ್ರಜಾಪ್ರಭುತ್ವ ದೇಶಗಳು ಒಟ್ಟಾಗಿ ಇಂತಹ ಡಿಜಿಟಲ್ ವಹಿವಾಟು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕಾಗಿದೆ. ರಾಷ್ಟ್ರೀಯ ಹಕ್ಕುಗಳನ್ನು ಗುರುತಿಸುವಿಕೆ ಮತ್ತು ವ್ಯಾಪಾರ, ಹೂಡಿಕೆ ಮತ್ತು ದೊಡ್ಡ ಸಾರ್ವಜನಿಕ ಒಳಿತನ್ನು ಉತ್ತೇಜಿಸಬೇಕು ಹೀಗಾಗಿ ಕ್ರಿಪ್ಟೋಕರೆನ್ಸಿ ಅಥವಾ ಬಿಟ್‌ಕಾಯಿನ್ ವಿಷಯದಲ್ಲಿ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ..
ಹೊಸ ತಂತ್ರಜ್ಞಾನಗಳಿಗೆ ಭಾರತದ ಹೊಂದಿಕೊಳ್ಳುತ್ತಿದೆ ಎಂದ ಪ್ರತಿಪಾದಿಸಿದ ಅವರು, ಟೆಲಿಕಾಂ ಕ್ಷೇತ್ರಕ್ಕೆ ೫ಜಿ ಮತ್ತು ೬ಜಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದೇಶೀಯ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ದೇಶ ಹೂಡಿಕೆ ಮಾಡುತ್ತಿದೆ ಎಂದು ಹೇಳಿದ್ದಾರೆ
ದೇಶದಲ್ಲಿ ಅಭಿವೃದ್ಧಿಪಡಿಸಿರುವ ಕೋವಿನ್ ಪ್ಲಾಟ್‌ಫಾರ್ಮ್ ಅನ್ನು ಇಡೀ ಜಗತ್ತಿಗೆ ಉಚಿತವಾಗಿ ನೀಡುತ್ತಿದ್ದೇವೆ ಮತ್ತು ಅದನ್ನು ಮುಕ್ತ ಸಾಫ್ಟ್‌ವೇರ್ ಮಾಡಿದ್ದೇವೆ. ಸಾರ್ವಜನಿಕ ಒಳಿತಿಗಾಗಿ ತಂತ್ರಜ್ಞಾನ ಮತ್ತು ನೀತಿಯ ಬಳಕೆಯೊಂದಿಗೆ ಭಾರತದ ವ್ಯಾಪಕ ಅನುಭವ, ಅಂತರ್ಗತ ಅಭಿವೃದ್ಧಿ ಮತ್ತು ಸಾಮಾಜಿಕ ಸಬಲೀಕರಣ ಅಭಿವೃದ್ಧಿಶೀಲ ಜಗತ್ತಿಗೆ ಸಹಾಯವಾಗಿದೆ ಎಂದು ತಿಳಿಸಿದ್ದಾರೆ.
ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳು ಹಣ ಲೇವಾದೇವಿ ಮತ್ತು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಮಾರ್ಗಗಳಾಗಿ ಪರಿಣಮಿಸಬಹುದು ಎಂದು ಕಳವಳ ವ್ಯಕ್ತಪಡಿಸಿದ ನಂತರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿ ಈ ವಿಷಯದ ಕುರಿತು ಸಭೆ ಕರೆದಿದ್ದು, ಕ್ರಿಪ್ಟೋಕರೆನ್ಸಿ ನಿಯಂತ್ರಿಸಲು ಕಾರ್ಯವಿಧಾನವನ್ನು ಜಾರಿಗೆ ತರಲೂ ಕೂಡ ಕೇಂದ್ರ ಸರ್ಕಾರ ಮುಂದಾಗಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement