ದೇವೇಗೌಡರ ಕುಟುಂಬದಿಂದ ರಾಜಕೀಯಕ್ಕೆ ಮತ್ತೊಬ್ಬರ ಎಂಟ್ರಿ : ರೇವಣ್ಣನ ಮತ್ತೊಬ್ಬ ಪುತ್ರನಿಗೆ ಪರಿಷತ್‌ ಟಿಕೆಟ್‌ ಘೋಷಣೆ

ಹಾಸನ: ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡರ ಕುಟುಂಬದಿಂದ ಮತ್ತೊಬ್ಬರು ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದ್ದಾರೆ. ದೇವೇಗೌಡರ ಮೊಮ್ಮಗ, ಎಚ್​.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್​​ ರೇವಣ್ಣಗೆ ಜೆಡಿಎಸ್​​ (JDS) ಟಿಕೆಟ್​​ ಘೋಷಿಸಲಾಗಿದೆ.
ಡಿ.10ರಂದು ನಡೆಯಲಿರುವ ವಿಧಾನ ಪರಿಷತ್​​ ಚುನಾವಣೆಗೆ ಹಾಸನದಿಂದ ಸೂರಜ್​​ ರೇವಣ್ಣ ಸ್ಪರ್ಧಿಸಲಿದ್ದಾರೆ. ಜೆಡಿಎಸ್​ ನಿಂದ ಸೂರಜ್​ ರೇವಣ್ಣಗೆ ಟಿಕೆಟ್​ ನೀಡಿರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಘೋಷಿಸಿದ್ದಾರೆ. ನಾಳೆ (ಶುಕ್ರವಾರ) ಮಧ್ಯಾಹ್ನ‌ 12 ರಿಂದ 12.30ರೊಳಗೆ ಸೂರಜ್​ ರೇವಣ್ಣ ನಾಮಪತ್ರ ಸಲ್ಲಿಸಲಿದ್ದಾರೆ.
ಎರಡ್ಮೂರು ದಿನಗಳ ಹಿಂದೆ ಹಾಸನದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ರೇಸ್​ನಲ್ಲಿ ತಾಯಿ ಭವಾನಿ ರೇವಣ್ಣ, ಪುತ್ರ ಸೂರಜ್​ ರೇವಣ್ಣ ಇಬ್ಬರ ಹೆಸರೂ ಕೇಳಿ ಬಂದಿತ್ತು. ಅಂತಿಮವಾಗಿ ಸೂರಜ್​ ರೇವಣ್ಣ ಅವರನ್ನು ಕಣಕ್ಕಿಳಿಸಲು ಇಂದು ಜೆಡಿಎಸ್ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ. ಎಚ್‌.ಡಿ.ರೇವಣ್ಣ ಅವರ ಮತ್ತೊಬ್ಬ ಪುತ್ರ ಪ್ರಜ್ವಲ್​ ರೇವಣ್ಣ ಹಾಸನದ ಸಂಸದರಾಗಿದ್ದಾರೆ. ಈಗ ರೇವಣ್ಣ ಹಿರಿಯ ಪುತ್ರ ಸೂರಜ್​​​ ರೇವಣ್ಣ ಸಹ ರಾಜಕೀಯಕ್ಕೆ ಧುಮುಕಿದ್ದಾರೆ.

ಪ್ರಮುಖ ಸುದ್ದಿ :-   ಜೈ ಶ್ರೀರಾಮ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement