ಪೇಜಾವರ ಶ್ರೀಗಳ ವಿರುದ್ಧ ಆಕ್ಷೆಪಾರ್ಹ ಹೇಳಿಕೆ; ಹಂಸಲೇಖ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಪೇಜಾವರ ಶ್ರೀಗಳ ವಿರುದ್ದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅಕ್ಷೆಪಾರ್ಹ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬಹಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಈಗ ಅವರ ವಿರುದ್ಧ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.
ಬುಧವಾರ (ನವೆಂಬರ್ 17) ಸಂಜೆ ಪೇಜಾವರ ಶ್ರೀಗಳ ಭಕ್ತರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಭೇಟಿ ಮಾಡಿ ಪ್ರತ್ಯೇಕ ದೂರು ನೀಡಿದ್ದಾರೆ. ವರ್ಗ ವರ್ಗಗಳ ನಡುವೆ ದುರುದ್ದೇಶದಿಂದ, ದ್ವೇಷಭಾವನೆ ಉಂಟು ಮಾಡಿರುತ್ತಾರೆ. ಸಮಾಜದಲ್ಲಿ ಶಾಂತಿ ಭಂಗ ಮಾಡಿದ್ದಾರೆ. ಗುರುಗಳ ಚಾರಿತ್ರ್ಯಕ್ಕೆ ಕಪ್ಪು ಚುಕ್ಕೆ ಇಡುವ ಉದ್ದೇಶದಿಂದ ಹಂಸಲೇಖ ಹೇಳಿಕೆ ನೀಡಿದ್ದಾರೆ ಎಂದು ದೂರು ನೀಡಲಾಗಿದೆ. ದೂರಿನ ಅನ್ವಯ ಎಫ್‌ಐಆರ್‌ (FIR) ದಾಖಲಿಸಿಕೊಂಡಿರುವ ಬಸವನಗುಡಿ ಪೊಲೀಸರು ತನಿಖೆ ನಡೆಸಲಿದ್ದಾರೆ.
ದಲಿತರ ಮನೆಯಲ್ಲಿ ಸವರ್ಣೀಯರ ವಾಸ್ತವ್ಯದ ಕುರಿತಂತೆ ಸಂಗೀತ ನಿರ್ದೇಶಕ ಹಂಸಲೇಖ ನೀಡಿದ ವಿವಾದಾತ್ಮಕ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ್ದಾರೆ. ಆದರೂ ವಿವಾದ ತಣ್ಣಗಾಗಿಲ್ಲ. ಅವರ ವಿರುದ್ಧ ಹಲವೆಡೆ ದೂರು ದಾಖಲಾಗುತ್ತಿದೆ. ಅಖಿಲ ಭಾರತ ಬ್ರಾಹ್ಮಣ ಮಹಾಸಭಾ ವಿಪ್ರ ಯುವ ವೇದಿಕೆಯಿಂದ ಹಂಸಲೇಖ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿತ್ತು.
ಪೇಜಾವರ ಶ್ರೀಗಳ ವಿರುದ್ಧ ಅಸಂಬದ್ಧ ಹೇಳಿಕೆ ನೀಡಿದ್ದು ತಪ್ಪು. ಅದಕ್ಕಾಗಿ ವಿದ್ಯಾಪೀಠ ಸರ್ಕಲ್ ಬಳಿ ಇರುವ ಪೇಜಾವರ ಶ್ರೀಗಳ ಬೃಂದಾವನದ ಮುಂದೆ ಬಂದು ಹಂಸಲೇಖ ಕ್ಷಮೆ ಕೇಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಟ ಮಾಡಲಿದ್ದೇವೆ ಎಂದು ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ಕೃಷ್ಣ ಹೇಳಿದ್ದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

 

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement