ಬೀದಿಯಲ್ಲಿ ನಿಂತು ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟಕ್ಕೆ ಯತ್ನಿಸುತ್ತಿದ್ದ ಪೊಲೀಸ್…ಕಾರಣ ಕೇಳಿದ್ರೆ ಮನಕರಗುತ್ತದೆ…ವಿಡಿಯೋ ವೈರಲ್

ಇಸ್ಲಾಮಾಬಾದ್: ಪೊಲೀಸ್ ಇಲಾಖೆ ಸಿಬ್ಬಂದಿಯೊಬ್ಬರು ತನ್ನ ಸ್ವಂತ ಮಕ್ಕಳನ್ನು 50,000 ರೂ.ಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಮನಕಲಕುವ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಘೋಟ್ಕಿ ಜಿಲ್ಲೆಯಲ್ಲಿ ನಡೆದಿದೆ. ಈ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ಆಗುತ್ತಿದೆ.
ಘೋಟ್ಕಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಯೊಬ್ಬರು ತಮ್ಮ ಸ್ವಂತ ಮಕ್ಕಳನ್ನು 50,000 ರೂ.ಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ವೀಡಿಯೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಈ ವಿಡಿಯೋದಲ್ಲಿ, ಕಾರಾಗೃಹ ಇಲಾಖೆಯ ಪೊಲೀಸ್ ನಿಸಾರ್ ಲಶಾರಿ ಅವರು ರಸ್ತೆಯ ಮಧ್ಯದಲ್ಲಿ ತನ್ನ ಇಬ್ಬರು ಮಕ್ಕಳನ್ನು ನಿಲ್ಲಿಸಿಕೊಂಡು ಕೂಗುತ್ತಿರುತ್ತಾರೆ. ನಂತರ ಕಿರಿಯ ಮಗನನ್ನು ತನ್ನ ಮಡಿಲಲ್ಲಿ ಎತ್ತಿಕೊಂಡು ತನ್ನ ಮಕ್ಕಳನ್ನು 50,000 ರೂ.ಗಳಗೆ ಮಾರುತ್ತಿರುವುದಾಗಿ ಕೂಗಿ ಜನರನ್ನು ಕರೆಯುತ್ತಿದ್ದಾರೆ.
ಹಿನ್ನೆಲೆ: ಲಶಾರಿಗೆ ತನ್ನ ಮಗನ ವೈದ್ಯಕೀಯ ಚಿಕಿತ್ಸೆಗಾಗಿ ರಜೆಯ ಅಗತ್ಯವಿತ್ತು. ಅವರ ಮೇಲಧಿಕಾರಿ ಬಳಿ ರಜೆ ಕೇಳಿದರೆ, ಅವರು ರಜೆ ಮಂಜೂರಿಗೆ ಲಂಚವನ್ನು ಕೇಳಿದ್ದಾರೆ. ತನ್ನ ಬಳಿ ಮೇಲಧಿಕಾರಿಗೆ ಕೇಳಿದಷ್ಟು ಲಂಚ ಕೊಡಲು ಸಾಧ್ಯವಾಗದಿದ್ದಾಗ ಆತನ ರಜೆಯನ್ನು ರದ್ದುಪಡಿಸಿದ ಮೇಲಧಿಕಾರಿ ನಗರದಿಂದ 120 ಕಿ.ಮೀ ದೂರದಲ್ಲಿರುವ ಲರ್ಕಾನಾಗೆ ಆತನನನ್ನಿ ವರ್ಗಾವಣೆ ಮಾಡಿದ್ದ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಲಂಚ ಕೊಡದಿದ್ದಕ್ಕೆ ಅವರು ನನಗೆ ಈ ಶಿಕ್ಷೆಯನ್ನು ಏಕೆ ನೀಡಿದರು. ನಾನು ತುಂಬಾ ಬಡವನಾಗಿದ್ದು, ಕಾರಾಗೃಹಗಳ ಇನ್ಸ್‍ಪೆಕ್ಟರ್ ಜನರಲ್‍ಗೆ ದೂರು ನೀಡಲು ಕರಾಚಿಗೆ ಹೋಗಲೂ ನನ್ನ ಬಳಿ ಹಣವಿಲ್ಲ. ಇಲ್ಲಿನ ಜನರು ತುಂಬಾ ಶಕ್ತಿಶಾಲಿಗಳು ಮತ್ತು ಸಾಮಾನ್ಯವಾಗಿ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ಅವರು ತಿಳಿಸಿದ್ದಾರೆ ಎಂದು ಅವರನ್ನು ಉಲ್ಲೇಖಿಸಿ ವೈಸ್‌ ಡೊರಲ್ಡ್‌ ನ್ಯೂಸ್‌ (Vice World News) ವರದಿ ತಿಳಿಸಿದೆ.
ನಾನು ಲಂಚವನ್ನು ಪಾವತಿಸಬೇಕೇ ಅಥವಾ ನನ್ನ ಮಗುವಿನ ಆರೋಗ್ಯಕ್ಕೆ ಹಣ ಪಾವತಿಸಬೇಕೇ? ನಾನು ಲರ್ಕಾನಾದಲ್ಲಿ ಕೆಲಸ ಮಾಡಬೇಕೇ ಅಥವಾ ನನ್ನ ಮಗುವನ್ನು ಚಿಕಿತ್ಸೆಗಾಗಿ ಕರೆದುಕೊಂಡು ಹೋಗಬೇಕೇ? ಎಂದು ಅವರು ಪ್ರಶ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.
ವಿಡಿಯೋ ವೈರಲ್ ಆಗಿದ್ದು, ತಂದೆಯ ಅಸಹಾಯಕತೆಯನ್ನು ಕಂಡು ನೆಟ್ಟಿಗರು ಮನಮಿಡಿದಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ..| ಆಫ್ರಿಕಾದ ಕಾರ್ಮಿಕರನ್ನು ಚಾವಟಿಯಿಂದ ಮನಬಂದಂತೆ ಥಳಿಸಿದ ಚೀನಾ ಮ್ಯಾನೇಜರ್ ; ವ್ಯಾಪಕ ಟೀಕೆ

4.5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement