ಭಾರೀ ಮಳೆ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಆರು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಇತರ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುಂಜಾಗ್ರತೆ ಕ್ರಮಗಳೊಂದಿಗೆ ಮುನ್ನೆಚ್ಚರಿಕೆ ವಹಿಸುವಂತೆ ಎಚ್ಚರಿಕೆ ನೀಡಲಾಗಿದೆ.
ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಬೆಂಗಳೂರು ನಗರಕ್ಕೆ ನಾಳೆ  ಹಾಗೂ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜ ನಗರ ಜಿಲ್ಲೆಗಳಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ತುಂತುರು ಮಳೆಯಾಗುತ್ತಿದೆ. ಮುಂದಿನ ನಾಲ್ಕು ದಿನದವರೆಗೂ ಮಳೆ ಇರಲಿದೆ. ಚೆನ್ನೈನಲ್ಲಿ ರೆಡ್‌ ಅಲರ್ಟ್‌ ಇರುವ ಕಾರಣ ಬೆಂಗಳೂರಿನಲ್ಲೂ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೊತೆಗೆ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ಆಗಿರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಜೊತೆಗೆ ಕರಾವಳಿ ಕರ್ನಾಟಕದಲ್ಲಿ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅಲರ್ಟ್‌ ಆಗಿರುವಂತೆ ತಿಳಿಸಲಾಗಿದೆ.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇನ್ನೂ ಒಂದು ವಾರ ಮುಂದುವರಿಯುವ ಸಾಧ್ಯತೆಯಿದೆ. ನವೆಂಬರ್ 23ರವರೆಗೆ ಭಾರಿ ಮಳೆ ನಿರೀಕ್ಷಿತ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯುವ ಭೀತಿ ಎದುರಾಗಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement