ಸಚಿವಾಲಯದ ಎಲ್ಲ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ: ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು: ಸಚಿವಾಲಯದ ಎಲ್ಲ ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ ಎಲ್ಲ ಅಧಿಕಾರಿ/ಸಿಬ್ಬಂದಿ ಹಾಜರಾತಿ ದಾಖಲಿಸುವುದು ಕಡ್ಡಾ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ನೂತನ ಆದೇಶ ಹೊರಡಿಸಿರುವ ಅವರು, ಕೆಸಿಎಸ್‍ಆರ್‌ ಟಿ ಅನ್ವಯ ಕಚೇರಿಗಳಿಗೆ ನಿಗದಿತ ಸಮಯದೊಳಗೆ ಹಾಜರಾಗುವುದು ಹಾಗೂ ಪ್ರತಿ ದಿನ ಒಟ್ಟು 7.30 ಗಂಟೆ ಕರ್ತವ್ಯ ನಿರ್ವಹಿಸುವುದು ಕಡ್ಡಾಯವಾಗಿರುತ್ತದೆ.
ಈ ನಿಟ್ಟಿನಲ್ಲಿ ಸರ್ಕಾರದ ಆದೇಶಗಳು ಹಾಗೂ ಸುತ್ತೋಲೆಗಳನ್ನು ಪಾಲಿಸದೆ ಬೇಜವಾಬ್ದಾರಿ ತೋರುತ್ತಿರುವುದನ್ನು ಗಮನಿಸಲಾಗಿದೆ. ಪ್ರಸ್ತುತ ಸಚಿವಾಲಯದ ಕೆಲವು ಇಲಾಖೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪರಿಶೀಲಿಸಲಾಗಿರುತ್ತದೆ. ಇಲಾಖೆಗಳ ಬಯೋಮೆಟ್ರಿಕ್ ಹಾಜರಾತಿಯಲ್ಲಿ ಈ ಕೆಳಕಂಡ ನ್ಯೂನತೆಗಳು ಕಂಡು ಬಂದಿರುತ್ತವೆ ಎಂದು ತಿಳಿಸಿದ್ದಾರೆ ಎಂದು ಈ ಸಂಜೆ.ಕಾಮ್‌ ವರದಿ ಮಾಡಿದೆ.
ಒಟ್ಟು 10 ಅಂಶಗಳ ನ್ಯೂನತೆಯನ್ನು ತಿಳಿಸಿರುವ ಅವರು, ಪ್ರಮುಖವಾಗಿ ಬಹುತೇಕ ಅಧಿಕಾರಿ/ಸಿಬ್ಬಂದಿ ಕಚೇರಿಗೆ ತಡವಾಗಿ ಆಗಮಿಸುತ್ತಿರುವುದನ್ನು ಮತ್ತು ನಿಗದಿತ 7.30 ಗಂಟೆಗಳಷ್ಟು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ ಎಂಬುದನ್ನು ಗಮನಿಸಲಾಗಿದೆ.
ವರ್ಗಾವಣೆಯಾದ, ಮುಂಬಡ್ತಿಯಾದ ಬಹುತೇಕ ಅಧಿಕಾರಿ/ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಅವರು ಬಹುತೇಕ ಅಧಿಕಾರಿ/ಸಿಬ್ಬಂದಿ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡುತ್ತಿಲ್ಲ.
ಅಧಿಕಾರಿಗಳು ಫ್ಲೆಕ್ಸಿ ಸೌಲಭ್ಯ ದುರುಪಯೋಗ ಮಾಡಿಕೊಳ್ಳುತ್ತಿರುವುದು ಹಾಗೂ ತಿಂಗಳಿನಲ್ಲಿ ಬಹುತೇಕ ಮಿಸ್ಸಿಂಗ್ ಫ್ಲಾಷ್‍ಗಳನ್ನು ಸರಿಪಡಿಸಿಕೊಳ್ಳುತ್ತಿರುವುದನ್ನು ಗಮನಿಸಲಾಗಿದೆ. ಸಚಿವಾಲಯದ ಎಲ್ಲ ಇಲಾಖೆಗಳ ಅಧಿಕಾರಿ/ಸಿಬ್ಬಂದಿ ಹಾಗೂ ಆಯಾ ಇಲಾಖೆಗಳ ಎಎಂಎಸ್ ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸುವಂತೆ ಹಾಗೂ ಮುಂದಿನ ದಿನಗಳಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ ಈ ರೀತಿಯ ನ್ಯೂನ್ಯತೆಗಳು ಪುನರಾವರ್ತಿಸದಂತೆ ಎಚ್ಚರಿಕೆ ನೀಡಿದ್ದು, ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಇಲಾಖೆಗಳ ಎಎಂಎಸ್ ಅಧಿಕಾರಿಗಳು ಆಯಾ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳ ಹಾಜರಾತಿ ನಿರ್ವಹಣೆಯ ಜವಾಬ್ದಾರಿ ಹೊಂದಿರುತ್ತಾರೆ. ಬಯೋ ಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ ಹಾಜರಾತಿ ದಾಖಲಿಸುವಲ್ಲಿ ಹಾಗೂ ಎಎಂಎಸ್ ಅಧಿಕಾರಿಗಳ ಕರ್ತವ್ಯ ನಿರ್ವಹಣೆಯಲ್ಲಿ ಇದೇ ರೀತಿಯ ತಪ್ಪುಗಳು ಪುನರಾವರ್ತಿಸಿದರೆ ಸಂಬಂಧಪಟ್ಟವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ರವಿಕುರ್ಮಾ ಕಟ್ಟುನಿಟ್ಟಾಗಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement