ರಾಜ್ಯಾದ್ಯಂತ ಮುಂದಿನ ಐದು ದಿನ ಭಾರೀ ಮಳೆ: ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್‌ 23 ರ ವರೆಗೆ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಭಾರೀ ಅವಾಂತರವೇ ಸೃಷ್ಟಿಯಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಅಲ್ಲದೇ ರಾಜ್ಯದ 11 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲೆಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಬೀಳುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಮೊದಲ ಮೂರು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ನಂತರದ ಎರಡು ದಿನ ಮೋಡ ಕವಿದ ವಾತಾವರಣ ಇರಲಿದೆ. ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳು ಮಳೆ ಸಾಧ್ಯತೆ ಇದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದು ನಾಳೆ ಯಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ನಾಳೆ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ ರಾಮನಗರ,ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದ್ದು, ಮೂರನೇ ದಿನ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಬೆಂಗಳೂರು, ಚಿತ್ರದುರ್ಗ, ದಾವಣಗೆರೆ ರಾಮನಗರ,ತುಮಕೂರು, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದ್ದು, ಮೂರನೇ ದಿನ ಬಳ್ಳಾರಿ ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ,ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
ಉತ್ತರ ಒಳನಾಡಿನ ಕೆಲ ಜಿಲ್ಲೆಗಳಿಗೂ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಾಳೆ ಧಾರವಾಡ, ಹಾವೇರಿ ಗದಗ ಕೊಪ್ಪಳ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಂಡ್ಯ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಭೀತಿಯ ಹಿನ್ನೆಲೆಯಲ್ಲಿ ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಶಾಲೆಗಳಿಗೆ ರಜೆಯನ್ನೂ ಘೋಷಣೆ ಮಾಡಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ. ಅಲ್ಲದೆ ಧಾರವಾಡದಲ್ಲಿ ನಾಳೆ ಒಂದಉ ದಿನ ಶಾಲೆಗೆ ರಜೆ ಘೋಚಿಸಲಾಗಿದೆ. ಮಳೆ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳಿಗೆ ರಜೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಡಿಡಿಪಿಐಗಳಿಗೆ ಸೂಚನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಭಾರಿ ಮಳೆ; ಕದ್ರಾ ಜಲಾಶಯದಿಂದ ನೀರು ಬಿಡುಗಡೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement