ಡಿ.13ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲದ ಅಧಿವೇಶನ

ಬೆಂಗಳೂರು: ವಿಧಾನಮಂಡಲದ ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 13ರಿಂದ ನಡೆಯಲಿದೆ.
ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ರಾಜ್ಯಪಾಲರು ಅಧಿಸೂಚನೆ ಹೊರಡಿಸಿದ್ದಾರೆ. ಮೂರು ವರ್ಷದ ನಂತರ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿದೆ.
ಡಿಸೆಂಬರ್ 13 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಸಭೆಯನ್ನು ಸಮಾವೇಶಗೊಳಿಸಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ.
ಕೋವಿಡ್ ಮತ್ತಿತರ ಕಾರಣಗಳಿಂದಾಗಿ ಕಳೆದ ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ. ಕಳೆದ ಸಚಿವ ಸಂಪುಟದಲ್ಲೂ ಸಹ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಬಗ್ಗೆ ಚರ್ಚೆ ನಡೆದಿತ್ತು. ಆದರೆ, ದಿನಾಂಕ ನಿಗದಿಯಾಗಿರಲಿಲ್ಲ. ನ.25 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಎಷ್ಟು ದಿನಗಳ ಕಾಲ ಅಧಿವೇಶನ ನಡೆಸಬೇಕೆಂಬುದರ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ.

5 / 5. 1

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement