ಭಾರೀ ಮಳೆ: ನಾಳೆ ಧಾರವಾಡ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಧಾರವಾಡ: ನಾಳೆ, ನವೆಂಬರ 20 ರಂದು ಧಾರವಾಡ ಜಿಲ್ಲೆಯ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ನಾಳೆಯೂ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ವರದಿ ನೀಡಿದ್ದು, ಮುಂಜಾಗ್ರತೆಯಾಗಿ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಇಂದು (ಶುಕ್ರವಾರ) ಸಂಜೆ ಆದೇಶ ಹೊರಡಿಸಿದ್ದಾರೆ. ಈ ಕುರಿತು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

5 / 5. 2

ಪ್ರಮುಖ ಸುದ್ದಿ :-   ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ರೂ. ಕಳೆದುಕೊಂಡ ಯುವಕ; ವೀಡಿಯೊ ಮಾಡಿಟ್ಟು ಆತ್ಮಹತ್ಯೆ

ನಿಮ್ಮ ಕಾಮೆಂಟ್ ಬರೆಯಿರಿ

advertisement