ನವದೆಹಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ‘ತನ್ನ ಹಿರಿಯಣ್ಣ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ ನಂತರ ಅದೇ ಪಕ್ಷದ ರಾಷ್ಟ್ರೀಯ ವಕ್ತಾರ ಮನೀಶ್ ತಿವಾರಿ ಪಿಪಿಸಿಸಿ ಮುಖ್ಯಸ್ಥ ಸಿಧು ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಾಕ್ ಪ್ರಧಾನಿ ಎಂದಿಗೂ ಭಾರತದ ಅಣ್ಣನಾಗಲು ಸಾಧ್ಯವಿಲ್ಲ ಎಂದು ಹೇಳಿರುವ ಮನೀಶ್ ತಿವಾರಿ ಭಯೋತ್ಪಾದಕರನ್ನು ಭಾರತದ ನೆಲಕ್ಕೆ ಕಳುಹಿಸಿ ನಮ್ಮ ಸೈನಿಕರನ್ನು ಕೊಂದ ನಂತರ ಪಾಕಿಸ್ತಾನದ ಪ್ರಧಾನಿ ಭಾರತದ ಅಣ್ಣ ಹೇಗಾಗುತ್ತಾನೆ ಎಂದು ಪ್ರಶ್ನಿಸಿದ್ದಾರೆ.
ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ತಮ್ಮ ಹಿರಿಯಣ್ಣ ಎಂದು ಸಂಬೋಧಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕರ್ತಾರ್‌ಪುರ ಯೋಜನೆಯ ಸಿಇಒ ಅವರೊಂದಿಗೆ ಸಂವಾದ ನಡೆಸುವಾಗ ಕಾಂಗ್ರೆಸ್ ನಾಯಕ ಸಿಧು ಈ ಹೇಳಿಕೆ ನೀಡಿದ್ದಾರೆ.
advertisement
9535127775 / 9901837775 / 6364528715 / 08362775155 / https://icsmpucollege.com/
ಕರ್ತಾರ್‌ಪುರ ಸಾಹಿಬ್ ಗುರುದ್ವಾರದಲ್ಲಿ ನಮನ ಸಲ್ಲಿಸಲು ಸಿಧು ಕರ್ತಾರ್‌ಪುರ ತಲುಪಿದ್ದರು. ನವಜೋತ್ ಸಿಂಗ್ ಸಿಧು ಅವರು ಆ ಸಂದರ್ಭದಲ್ಲಿ ತಮ್ಮನ್ನು ಸ್ವಾಗತಿಸಲು ಬಂದ ಕರ್ತಾರ್‌ಪುರ ಯೋಜನೆಯ ಸಿಇಒ ಬಳಿ ಪಾಕ್ ಪ್ರಧಾನಿಯ ಬಗ್ಗೆ ನನಗೆ ಅಪಾರ ಪ್ರೀತಿ ಇದೆ ಎಂದು ಹೇಳಿದ್ದಾರೆ.
ಪಾಕಿಸ್ತಾನವು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಮತ್ತು ಗಡಿ ಪ್ರದೇಶಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಸಕ್ರಿಯವಾಗಿ ತಳ್ಳುತ್ತಿರುವ ಸಮಯದಲ್ಲಿ ಸಿಧು ಅವರ ಹೇಳಿಕೆಗಳುಈಗ ವಿವಾದ ಸೃಷ್ಟಿಸಿವೆ. ಪಾಕಿಸ್ತಾನದ ಪ್ರಧಾನಿಯೊಂದಿಗಿನ ಅವರ ಆತ್ಮೀಯತೆಯ ಕುರಿತು ಬಿಜೆಪಿ ಐಟಿ ಮುಖ್ಯಸ್ಥರು ವಿಷಾದಿಸಿದ್ದಾರೆ. ಅಲ್ಲದೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಅವರು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್‌ಗಿಂತ ಸಿಧು ಅವರನ್ನು ಆದ್ಯತೆ ನೀಡಿದ್ದಾರೆ. ಈಗ ಸಿಧು ಅವರ ಹೇಳಿಕೆಯನ್ನು ಗಮನಿಸಬೇಕು ಎಂದು ಹೇಳಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ