ಸತತ 5ನೇ ಬಾರಿಗೆ ಭಾರತದ ಸ್ವಚ್ಛ ನಗರ ಪಟ್ಟ ಅಲಂಕರಿಸಿದ ಇಂದೋರ್..!

ನವದೆಹಲಿ: ಕೇಂದ್ರ ಸರ್ಕಾರ ದೇಶದ ಸ್ವಚ್ಚ ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಸತತ 5ನೇ ಬಾರಿಗೆ ಇಂದೋರ್ ಸ್ವಚ್ಛ ನಗರಿ ಪ್ರಶಸ್ತಿ ಪಡೆದಿದೆ.
ಆದರೆ ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರಿಗೆ ನಿರಾಸೆಯಾಗಿದೆ. ಮೈಸೂರು ನಗರ 5 ನೇ ಸ್ಥಾನ ಪಡೆದುಕೊಂಡಿದೆ.
ರಾಷ್ಟ್ರಪತಿ ರಾಮನಾಥ ಕೋವಿಂದ್ ಶನಿವಾರ ಪ್ರಶಸ್ತಿ ವಿಜೇತ ನಗರಗಳ ಹೆಸರನ್ನು ಪ್ರಕಟಿಸಿದ್ದಾರೆ. ಸೂರತ್ ಮತ್ತು ವಿಜಯವಾಡ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಕನಸನ್ನು ಹೊತ್ತಿದ್ದ ಮೈಸೂರಿಗೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರ ನಡೆಸಿದ ಸ್ವಚ್ಛ ರಾಜ್ಯಗಳ ಸರ್ವೆಯಲ್ಲಿ ಛತ್ತೀಸ್‌ಘಡ ಮೊದಲ ಸ್ಥಾನ ಪಡೆದಿದೆ. ಹಾಗೆಯೇ ಗಂಗಾ ನದಿ ಪಾತ್ರದ ಸ್ವಚ್ಛ ನಗರಗಳ ಪಟ್ಟಿಯಲ್ಲಿ ವಾರಣಾಸಿ ಮೊದಲ ಸ್ಥಾನ ಪಡೆದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ