ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ಅಣ್ಣ ಎಂದು ಹೇಳಿ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ ಸಿಧು

ನವದೆಹಲಿ: ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು (Navjot Singh Sidhu) ಈಗ ಮತ್ತೊಮ್ಮೆ ವಿವಾದದ ಕಿಡಿ ಹೊತ್ತಿಸಿದ್ದಾರೆ. ಸಿಧು ಹೇಳಿಕೆಯಿಂದ ಕಾಂಗ್ರೆಸ್ ಇಕ್ಕಟ್ಟಿಗೆ ಸಿಲುಕಿದೆ.
ಇಂದು ಪಾಕಿಸ್ತಾನದ ಕರ್ತಾರ್‌ಪುರ ಸಾಹಿಬ್​ಗೆ ಭೇಟಿ ನೀಡಿರುವ ನವಜೋತ್ ಸಿಂಗ್ ಸಿಧು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ನನ್ನ ಅಣ್ಣ ಎಂದು ಹೇಳುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕ್ರಿಕೆಟ್​ ಆಡುತ್ತಿದ್ದ ದಿನಗಳಿಂದಲೂ ಇಮ್ರಾನ್ ಖಾನ್ ನನ್ನ ಗೆಳೆಯ ಹಾಗೂ ಅಣ್ಣನಂತಿದ್ದರು ಎಂದು ಸಿಧು ಬಣ್ಣಿಸಿದ್ದಾರೆ.

ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಪಾಕಿಸ್ತಾನದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ಈ ಸಂದರ್ಭದಲ್ಲಿ ಪಿಎಂಯು ಸಿಇಒ ಮೊಹಮ್ಮದ್ ಲತೀಫ್ ಅವರೊಂದಿಗೆ ಮಾತನಾಡಿದ ನವಜೋತ್ ಸಿಂಗ್ ಸಿಧು, ನವಜೋತ್ ಸಿಂಗ್ ಸಿಧು ಅವರು, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಡಾ ಭಾಯಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಅನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ.
ಸಿಧು ಅವರ ವಿಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. “ರಾಹುಲ್ ಗಾಂಧಿಯವರ ನೆಚ್ಚಿನ ನವಜೋತ್ ಸಿಂಗ್ ಸಿಧು ಅವರು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನು “ಬಡಾ ಭಾಯ್” ಎಂದು ಕರೆಯುತ್ತಿದ್ದಾರೆ. ಕಳೆದ ಬಾರಿ ಅವರು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಅವರನ್ನು ತಬ್ಬಿಕೊಂಡಿದ್ದರು ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದಾರೆ.

ನವಜೋತ್ ಸಿಂಗ್ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಹೊಗಳುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲೂ ಪಾಲ್ಗೊಂಡಿದ್ದ ಸಿಧು ಅವರ ಪಾಕಿಸ್ತಾನ ಪರ ಧೋರಣೆಯನ್ನು ಕಾಂಗ್ರೆಸ್ ಸೇರಿದಂತೆ ಪಕ್ಷಗಳು ಕೂಡ ಖಂಡಿಸಿವೆ. ಇದೀಗ ಮತ್ತೊಮ್ಮೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಬಣ್ಣಿಸುವ ಮೂಲಕ ನವಜೋತ್ ಸಿಂಗ್ ಕಾಂಗ್ರೆಸ್ ವಿರುದ್ಧ ವಿಪಕ್ಷಗಳಿಗೆ ವಾಗ್ದಾಳಿ ನಡೆಸಲು ತಾವೇ ಅನುವು ಮಾಡಿಕೊಟ್ಟಂತಾಗಿದೆ.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement