ಬನಿಯನ್‌ ಧರಿಸಿ ವಿಚಾರಣೆಗೆ ಹಾಜರಾದ ವ್ಯಕ್ತಿಗೆ ದೆಹಲಿ ಹೈಕೋರ್ಟಿನಿಂದ 10 ಸಾವಿರ ರೂ. ದಂಡ

ನವದೆಹಲಿ: ಬನಿಯನ್‌ ಧರಿಸಿ ವಿಚಾರಣೆಗೆ ಹಾಜರಾದ ವ್ಯಕ್ತಿಗೆ 10 ಸಾವಿರ ರೂ.ಗಳ ದಂಡ ವಿಧಿಸಿರುವ ದೆಹಲಿ ಹೈಕೋರ್ಟ್‌, ಇಂತಹ ನಡೆಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಹೇಳಿದೆ.
ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯುತ್ತಿದ್ದರೂ ಅವರು ಸೂಕ್ತ ಧಿರಿಸಿನಲ್ಲಿ ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. ಹೀಗಾಗಿ ಐದನೇ ಅರ್ಜಿದಾರರಿಗೆ 10,000 ರೂ.ಗಳ ದಂಡ ವಿಧಿಸಲಾಗಿದ್ದು ಒಂದು ವಾರದೊಳಗೆ ದೆಹಲಿ ಹೈಕೋರ್ಟ್ ಕಾನೂನು ಸೇವೆಗಳ ಸಮಿತಿಗೆ ಆ ಹಣ ನೀಡಬೇಕೆಂದು ನ್ಯಾಯಾಲಯ ಸೂಚಿಸಿದೆ.
ಗಂಡನ ವಿರುದ್ಧ ಹೆಂಡತಿ ದಾಖಲಿಸಿರುವ ಎಫ್‌ಐಆರ್ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯು ನ್ಯಾ. ರಜನೀಶ್ ಭಟ್ನಾಗರ್ ನೇತೃತ್ವದ ಪೀಠದಲ್ಲಿ ನಡೆಯಿತು. ಕಕ್ಷಿದಾರರು ತಮ್ಮ ನಡುವಿನ ವ್ಯಾಜ್ಯ ಬಗೆಹರಿಸಿಕೊಂಡಿದ್ದು ಮದುವೆಯನ್ನು ರದ್ದುಗೊಳಿಸಲಾಗಿದೆ. ವಿವಾಹದಿಂದ ಜನಿಸಿದ ಹೆಣ್ಣುಮಗುವನ್ನು ಭೇಟಿಯಾಗಲು ತಂದೆಗೆ ಅವಕಾಶ ನೀಡಿಲ್ಲ ಎಂದು ನ್ಯಾಯಾಲಯಕ್ಕೆ ಅರ್ಜಿದಾರರ ಪರ ವಕೀಲರು ತಿಳಿಸಿದರು. ಮಗುವಿನ ಯೋಗಕ್ಷೇಮದ ಬಗ್ಗೆ ತಿಳಿಸಲು ಅರ್ಜಿದಾರರಿಗೆ ಇ ಮೇಲ್ ಕಳುಹಿಸಬೇಕು ಎಂದು ಗಂಡನ ಪರ ವಾದ ಮಂಡಿಸಿದ ವಕೀಲರು ನ್ಯಾಯಾಲಯವನ್ನು ಕೇಳಿದರು, ಅದಕ್ಕೆ ತಾಯಿ ಒಪ್ಪಿದರು.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯು ಗುರುತ ಹಚ್ಚಲು ಅಗತ್ಯವಿದ್ದ ಕಾರಣಕ್ಕೆ ಐದನೇ ಅರ್ಜಿದಾರರೊಬ್ಬರು ನ್ಯಾಯಾಲಯದ ವಿಚಾರಣೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅವರು ಬನಿಯನ್‌ನಲ್ಲಿ ವರ್ಚುವಲ್‌ ವಿಚಾರಣೆಯಲ್ಲಿ ಪಾಲ್ಗೊಂಡಿದ್ದು ನ್ಯಾಯಾಲಯವನ್ನು ಕೆರಳಿಸಿತು. ಅವರು ಬಿನಿಯನ್‌ ಧರಿಸಿ ವಿಚಾರಣೆಗೆ ಹಾಜರಾಗಿದ್ದಕ್ಕೆ 10 ಸಾವಿರ ರೂ.ಗಳ ದಂಡ ವಿಧಿಸಿತು.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement