ಮಗುವಿಗೆ ಜನ್ಮ ನೀಡಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ !

ಮಂಗಳೂರು: ಎಸ್ಎಸ್ಎಲ್ಸಿ ಕಲಿಯುತ್ತಿರುವ ವಿದ್ಯಾರ್ಥಿನಿಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದ್ದು, ಅಪ್ರಾಪ್ತೆ ಬಾಲಕಿ ಗರ್ಭ ಧರಿಸಲು ಕಾರಣನಾದ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
10ನೇ ತರಗತಿ ಕಲಿಯುತ್ತಿರುವ ವಿದ್ಯಾರ್ಥಿನಿಯ ಉದರದಲ್ಲಿ ಗೆಡ್ಡೆ ಬೆಳೆದಿದೆ ಎಂದು ತಿಳಿದು ಹೆತ್ತವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಪರೀಕ್ಷೆ ನಡೆಸಿದಾಗ ವಿದ್ಯಾರ್ಥಿನಿ ಗರ್ಭಿಣಿ ಎಂದು ತಿಳಿದು ಬಂದಿದೆ. ನಂತರ ಈಕೆ ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಗುರುವಾರ ನಡೆದ ಹೆರಿಗೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರ ಗಮನಕ್ಕೆ ತಂದಿದ್ದರು.
ಹತ್ತನೇ ತರಗತಿಯ ವಿದ್ಯಾರ್ಥಿನಿಯ ಹೊಟ್ಟೆ ದೊಡ್ಡದಾಗಿತ್ತು. ಮನೆಯವರೆಲ್ಲಾ ಗಡ್ಡೆ ಬೆಳೆದಿರಬೇಕು ಎಂದೇ ಬಾವಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ನಡೆಸಿದ ವೇಳೆಯಲ್ಲಿ ಬಾಲಕಿ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಇದೀಗ ಮಂಗಳೂರಿನ ಆಸ್ಪತ್ರೆಯಲ್ಲಿ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.
ಘಟನೆಯ ಕುರಿತು ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪ್ಪಿನಂಗಡಿ ಠಾಣೆಯ ಪೊಲೀಸರಿಗೆ ಸುದ್ದಿಯನ್ನು ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಾಲಕಿಯನ್ನು ವಿಚಾರಣೆಗೆ ಒಳಪಡಿಸದ ವೇಳೆಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿರೆಬಂಡಾಡಿ ಗ್ರಾಮದ ನಿವಾಸಿಯಾಗಿರುವ ಕೇಶವ ಎಂಬಾತ ತನ್ನ ಮೇಲೆ ಅತ್ಯಾಚಾರವೆಸಗಿರುವ ಕುರಿತು ಬಾಲಕಿ ಆರೋಪಿಸಿದ್ದಾಳೆ. ಈ ಹಿನ್ನೆಲೆಯಲ್ಲೀಗ ಪೊಲೀಸರು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣಗೆ ನಾವು ಅನುಮತಿ ನೀಡಿಲ್ಲ ; ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ಜರ್ಮನಿಗೆ ತೆರಳಿದ್ದಾರೆ : ವಿದೇಶಾಂಗ ಸಚಿವಾಲಯ

1 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement