ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್

ನವದೆಹಲಿ: ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ತೆಲಂಗಾಣ ರಾಜ್ಯ ಸರ್ಕಾರವು ₹ 3 ಲಕ್ಷ ಪರಿಹಾರ ಘೋಷಿಸಿದೆ. ದೆಹಲಿಯಲ್ಲಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಈ ಕುರಿತು ಘೋಷಣೆ ಮಾಡಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಸಂತ್ರಸ್ತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ತಲಾ ₹ 25 ಲಕ್ಷ ಪರಿಹಾರ ನೀಡಬೇಕು. ಅವರ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ಕೇಂದ್ರವು ಅಂಗೀಕರಿಸಿದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ ಒಂದು ದಿನದ ನಂತರ ಕೆ.ಸಿ.ಚಂದ್ರಶೇಖರ ರಾವ್‌ ಅವರಿಂದ ಈ ಘೋಷಣೆ ಬಂದಿದೆ.
ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿಯವರ ಪುತ್ರ ಕೆ.ಟಿ. ರಾಮರಾವ್‌ ಮಾತನಾಡಿ, ಎನ್‌ಸಿಆರ್‌ನಲ್ಲಿ ಕೃಷಿ ಕಾನೂನುಗಳ ವಿರುದ್ಧ ಹೋರಾಡಿ ಜೀವ ಕಳೆದುಕೊಂಡ 750ಕ್ಕೂ ಅಧಿಕ ರೈತರಿಗೆ ₹3 ಲಕ್ಷ ಪರಿಹಾರ ಘೋಷಿಸಿದ್ದಕ್ಕಾಗಿ ಗೌರವಾನ್ವಿತ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಅವರು ಹೆಮ್ಮೆಪಡುತ್ತಾರೆ. ಭಾರತವು ಪ್ರತಿ ರೈತ ಕುಟುಂಬಕ್ಕೆ ₹ 25 ಲಕ್ಷ ಎಕ್ಸ್ ಗ್ರೇಷಿಯಾವನ್ನು ಘೋಷಿಸಬೇಕು ಮತ್ತು ಎಲ್ಲಾ ಪ್ರಕರಣಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.
ರೈತರಿಗೆ ಪರಿಹಾರ ನೀಡಬೇಕು ಎಂದು ಹಲವು ರಾಜಕೀಯ ಪಕ್ಷಗಳು ಆಗ್ರಹಿಸಿದ್ದವು. ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಕುಟುಂಬಗಳಿಗೆ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಶುಕ್ರವಾರ ಒತ್ತಾಯಿಸಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ