ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ..: ಈ ಜಿಲ್ಲೆಗಳಲ್ಲಿಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಅಕಾಲಿಕ ಹಿಂಗಾರು ಮಳೆ ಅಬ್ಬರದಿಂದ ರಾಜ್ಯ ತತ್ತರಿಸಿದ್ದು, ಮಳೆಯ ಅಬ್ಬರ ನವೆಂಬರ್ 23 ವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿಮೀ ಇರಲಿದ್ದು, ಅದು 60ಕಿಮೀ ವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.
ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಅದರ ನೆರೆಹೊರೆಯ ಪ್ರದೇಶಗಳ ಮೇಲೆ ಗಾಳಿಯ ಪರಿಚಲನೆ ಆಗಲಿದೆ. ಈ ಕಾರಣದಿಂದ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ಕೇರಳಗಳಲ್ಲೂ ಕೂಡಭಾರೀ ಮಳೆಯಾಗುತ್ತಿದ್ದು, ಈಗ ಗೋವಾ, ಮಹಾರಾಷ್ಟ್ರಗಳಲ್ಲೂ ಭಾರಿ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.
ಕಳೆದ ಬಾರಿಯ ಹಿಂಗಾರಿ ಮಳೆಗೆ ಹೋಲಿಸಿದರೆ ಈ ಬಾರಿ ಶೇಕಡಾ 390ರಷ್ಟು ಅಧಿಕ ಮಳೆಯಾಗಿದೆ. 1,400ಕ್ಕೂಹೆಚ್ಚು ಮನೆಗಳು ಕುಸಿದಿವೆ. ಭಾರೀ ಮಳೆಯಾದ 6 ಜಿಲ್ಲೆಗಳಲ್ಲಿ 92,088 ಹೆಕ್ಟೇರ್‍ನ್ನಷ್ಟು ಬೆಳೆ ನಾಶವಾಗಿದೆ. ಕಟಾವಿಗೆ ಸಿದ್ಧವಾಗಿದ್ದ ಬೆಳೆಗಳು ಕೊಳೆತು ಹೋಗಿವೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement