ನಿಗದಿತ ಸಮಯಕ್ಕೆ ಶುಲ್ಕ ಪಾವತಿಸಲು ಸಾಧ್ಯವಾಗದ ದಲಿತ ವಿದ್ಯಾರ್ಥಿಗಳಿಗೆ ಸೀಟು ಸೃಷ್ಟಿಸುವಂತೆ ಐಐಟಿ-ಬಾಂಬೆಗೆ ಆದೇಶ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆಯಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಹೊಂದಿದ್ದರೂ ತಾಂತ್ರಿಕ ದೋಷದಿಂದಾಗಿ ಗಡುವಿನೊಳಗೆ ಶುಲ್ಕ ಪಾವತಿಸಲಾಗದೆ ಸೀಟು ವಂಚಿತನಾಗಿದ್ದ ದಲಿತ ಸಮುದಾಯದ 17 ವರ್ಷದ ಬಾಲಕನಿಗೆ ಸೀಟು ನಿಗದಿಪಡಿಸುವಂತೆ ಸುಪ್ರೀಂಕೋರ್ಟ್‌ ಸೋಮವಾರ ನಿರ್ದೇಶನ ನೀಡಿದೆ.
ಸಂವಿಧಾನದ 142ನೇ ವಿಧಿಯಡಿಯಲ್ಲಿ ತನ್ನ ಅಧಿಕಾರ ಚಲಾಯಿಸಿ ವಿದ್ಯಾರ್ಥಿಗೆ ಸೀಟು ನಿಗದಿಪಡಿಸುವಂತೆ ಜಂಟಿ ಸೀಟು ಹಂಚಿಕೆ ಪ್ರಾಧಿಕಾರಕ್ಕೆ (ಜೋಸಾ) ನ್ಯಾಯಮೂರ್ತಿಗಳಾದ ಡಿ. ವೈ. ಚಂದ್ರಚೂಡ್ ಮತ್ತು ಎ. ಎಸ್. ಬೋಪಣ್ಣ ಅವರಿದ್ದ ಪೀಠ ನಿರ್ದೇಶಿಸಿತು. ತನ್ನ ಯಾವುದೇ ತಪ್ಪಿಲ್ಲದೆಯೂ ವಿದ್ಯಾರ್ಥಿ ಪ್ರವೇಶಾತಿ ಅವಕಾಶ ಕಳೆದುಕೊಂಡರೆ ಅದು ನ್ಯಾಯದ ದೊಡ್ಡ ವಿಡಂಬನೆಯಾಗಲಿದೆ ಎಂದು ನ್ಯಾಯಾಲಯ ಹೇಳಿದೆ.
ಬೇರೆ ಯಾವುದೇಏ ವಿದ್ಯಾರ್ಥಿಗಳ ಪ್ರವೇಶಕ್ಕೆ ತೊಂದರೆಯಾಗದಂತೆ ಸೀಟು ಹಂಚಿಕೆ ಮಾಡಬೇಕು ಎಂದು ಸೂಚಿಸಿದ ನ್ಯಾಯಾಲಯ, ಇತರ ಯಾವುದೇ ಸೀಟು ಖಾಲಿಯಾದರೆ ಈ ಸೀಟನ್ನು ಕ್ರಮಬದ್ಧಗೊಳಿಸುವಂತೆ ಸ್ಪಷ್ಟಪಡಿಸಿತು. ಎಲ್ಲ ಸೀಟುಗಳು ಭರ್ತಿಯಾಗಿದ್ದು, ಸೀಟುಗಳು ಲಭ್ಯವಿಲ್ಲ ಎಂದು ಜೋಸಾ ಮಾಹಿತಿ ನೀಡಿದ ಬಳಿಕ ನ್ಯಾಯಾಲಯ ಪ್ರತ್ಯೇಕವಾಗಿ ಸೀಟು ಸೃಜಿಸಲು ಆದೇಶಿಸಿತು.

ಪ್ರಮುಖ ಸುದ್ದಿ :-   "ನನ್ನ 90 ಸೆಕೆಂಡುಗಳ ಭಾಷಣವು ಕಾಂಗ್ರೆಸ್, ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಮೂಡಿಸಿದೆ" : ಪ್ರಧಾನಿ ಮೋದಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement