ಪಠಾಣ್‌ಕೋಟ್‌ ಸೇನಾ ಶಿಬಿರದ ಬಳಿ ಗ್ರೆನೇಡ್ ಸ್ಫೋಟ

ನವದೆಹಲಿ: ಪಠಾಣ್‌ಕೋಟ್‌ನ ವಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟಿನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ವ ಸಂಭವಿಸಿದೆ.
ಕಂಟೋನ್ಮೆಂಟ್‌ನ ತ್ರಿವೇಣಿ ಗೇಟಿನ ವಮುಂದೆ ಕೆಲವು ಅಪರಿಚಿತ ಮೋಟರ್‌ವಸೈಕ್ಲಿಸ್ಟ್‌ಗಳು ಗ್ರೆನೇಡ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ” ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪಠಾಣ್‌ಕೋಟ್‌ನ ಎಲ್ಲಾ ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ಅಲರ್ಟ್ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸ್ಫೋಟದಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಸತ್ತ ತಾಯಿ ತನ್ನೊಂದಿಗೆ ಶಾಶ್ವತವಾಗಿರುವಂತೆ ಮಾಡಲು ಪ್ಲಾಸ್ಟಿಕ್ ಬ್ಯಾರೆಲ್‌ನಲ್ಲಿ ಸಿಮೆಂಟ್‌ ಹಾಕಿ ಶವ ಹೂತಿಟ್ಟ ಮಗ...!
advertisement

ನಿಮ್ಮ ಕಾಮೆಂಟ್ ಬರೆಯಿರಿ