ಭೀಕರ ಅಪಘಾತ:ಒಂದೇ ಕುಟುಂಬದ ಮೂವರ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

ಗದಗ: ಟ್ರ್ಯಾಕ್ಟರ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಮುಂಡರಗಿ ತಾಲೂಕಿನ ಡಂಬಳ- ಮೇವುಂಡಿ ಬಳಿ ನಡೆದಿದೆ.
ಮತ್ತೊಬ್ಬರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರು ಹುಬ್ಬಳ್ಳಿಯ ನವನಗರದವರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಕಾರ್, ಟ್ರ್ಯಾಕ್ಟರ್‌ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮತ್ತೊಬ್ಬ ಮಹಿಳೆ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟ್ರ್ಯಾಕ್ಟರ್‌ ಮೆಕ್ಕೆ ಜೋಳ ತುಂಬಿಕೊಂಡು ಮುಂಡರಗಿಯಿಂದ ಗದಗ ಕಡೆಗೆ ಬರುತ್ತಿತ್ತು. ಮುಂಡರಗಿ ತಾಲೂಕಿನ ಶಿಂಗಟಾಲೂರ ವೀರಭದ್ರೇಶ್ವರ ದೇವರಿಗೆ ಪೂಜೆ ಸಲ್ಲಿಸಿ, ಮರಳಿ ಹುಬ್ಬಳ್ಳಿಗೆ ಕಾರಿನಲ್ಲಿ ಹೊರಟ್ಟಿದ್ರು ಎನ್ನಲಾಗಿದೆ.   ಡಿಕ್ಕಿ ರಭಸಕ್ಕೆ ಕಾರ್ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

ಇಂದಿನ ಪ್ರಮುಖ ಸುದ್ದಿ :-   ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement