ಮುಂಬೈ ಮಾಜಿ ಪೊಲೀಸ್‌ ಆಯುಕ್ತ ಪರಮ್ ಬೀರ್ ಸಿಂಗ್ ಬಂಧಿಸದಂತೆ ಸುಪ್ರೀಂ ಕೋರ್ಟ್ ರಕ್ಷಣೆ, ತನಿಖೆಗೆ ಹಾಜರಾಗುವಂತೆ ಸೂಚನೆ

ನವದೆಹಲಿ: ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪೋಲೀಸ್ ಪರಮ್ ಬೀರ್ ಸಿಂಗ್ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿದೆ.
ಸಿಂಗ್ ಅವರ ಮನವಿಯನ್ನು ಆಲಿಸಲು ಒಪ್ಪಿಗೆ ಸೂಚಿಸಿದ ನ್ಯಾಯಾಲಯವು ಮಹಾರಾಷ್ಟ್ರ ಸರ್ಕಾರ ಮತ್ತು ಸಿಬಿಐಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ನಿಗದಿಪಡಿಸಲಾಗಿದೆ.
ಇದನ್ನು ಪುರಸ್ಕರಿಸಿದ ನ್ಯಾಯಾಲಯವು ಪರಮ್ ಬೀರ್ ಸಿಂಗ್ ಅವರಿಗೆ ತನಿಖೆಗೆ ಹಾಜರಾಗುವಂತೆ ಸೂಚಿಸಿದೆ. ಕಳೆದ ವಿಚಾರಣೆಯಲ್ಲಿ, ಅವರು ಎಲ್ಲಿದ್ದಾರೆ ಎಂದು ತಿಳಿಯುವವರೆಗೆ ಬಂಧನದಿಂದ ರಕ್ಷಣೆಗಾಗಿ ಅವರ ಮನವಿಯನ್ನು ಪರಿಗಣಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಅವರು ಪರಾರಿಯಾಗಲು ಬಯಸುವುದಿಲ್ಲ. ಅವರು ಓಡಿಹೋಗಲು ಬಯಸುವುದಿಲ್ಲ. ಆದರೆ ಅವರು ಮಹಾರಾಷ್ಟ್ರಕ್ಕೆ ಪ್ರವೇಶಿಸಿದ ತಕ್ಷಣ ಅವರ ಜೀವಕ್ಕೆ ಬೆದರಿಕೆ ಇದೆ,” ಎಂದು ವಕೀಲರು ಹೇಳಿದ್ದಾರೆ.
ನ್ಯಾಯಾಲಯವು ಕೇಳಿದರೆ 48 ಗಂಟೆಗಳ ಒಳಗೆ ಯಾವುದೇ ಸಿಬಿಐ ಅಧಿಕಾರಿಯ ಮುಂದೆ ಹಾಜರಾಗಲು ಪರಂ ಬೀರ್ ಸಿಂಗ್ ಸಿದ್ಧ ಎಂದು ಮಾಜಿ ಪೊಲೀಸ್ ಅಧಿಕಾರಿಯ ವಕೀಲರು ತಿಳಿಸಿದ್ದಾರೆ.
ಸಿಂಗ್ ಮತ್ತು ನಗರದ ಇತರ ಕೆಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಸುಲಿಗೆ ಪ್ರಕರಣದಲ್ಲಿ ಸಿಂಗ್ ಅವರನ್ನು “ಘೋಷಿತ ಅಪರಾಧಿ” ಎಂದು ಬಾಂಬೆಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಘೋಷಿಸಿದೆ.
ಸಿಂಗ್ ಕೊನೆಯದಾಗಿ ಈ ವರ್ಷದ ಮೇ ತಿಂಗಳಲ್ಲಿ ತಮ್ಮ ಕಚೇರಿಗೆ ಹಾಜರಾಗಿದ್ದರು, ನಂತರ ಅವರು ರಜೆಯ ಮೇಲೆ ತೆರಳಿದ್ದರು. ಈಗ ಅವರು ಎಲ್ಲಿದ್ದಾರೆ ಎಂಬುದು ತಿಳಿದಿಲ್ಲ ಎಂದು ರಾಜ್ಯ ಪೊಲೀಸರು ಕಳೆದ ತಿಂಗಳು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದರು.
ಸುಲಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರ ಅಪರಾಧ ವಿಭಾಗ, ಜಾಮೀನು ರಹಿತ ವಾರೆಂಟ್ ಹೊರಡಿಸಿದ ನಂತರವೂ ಐಪಿಎಸ್ ಅಧಿಕಾರಿಯನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ ಎಂದು ಹೇಳುವ ಮೂಲಕ ಅವರ ವಿರುದ್ಧ ಘೋಷೀತ ಅಪರಾಧಿ ಎಂದು ಘೋಷಿಸಲು ಅನುಮತಿ ಕೋರಿತ್ತು.

ಪ್ರಮುಖ ಸುದ್ದಿ :-   ವೀಡಿಯೊ..| ರಾಷ್ಟ್ರದ ಸಂಪತ್ತಿನಲ್ಲಿ ಮುಸ್ಲಿಮರಿಗೆ ಮೊದಲ ಆದ್ಯತೆ ; ಮನಮೋಹನ ಸಿಂಗ್ ಹಳೆಯ ವೀಡಿಯೊ ಮೂಲಕ ಕಾಂಗ್ರೆಸ್ಸಿಗೆ ತಿರುಗೇಟು ನೀಡಿದ ಬಿಜೆಪಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement