ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲುವ ಕಾನೂನು ತರಲಿ: ಹೆಚ್.ಡಿ ರೇವಣ್ಣ

ಹಾಸನ: ಬೇಕಾದರೆ ಕುಟುಂಬದಿಂದ ಒಬ್ಬರೇ ಚುನಾವಣೆಗೆ ನಿಲ್ಲಲಿ ಎಂದು ಕಾನೂನು ತರಲಿ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ವಿಧಾನ ಪರಿಷತ್‌ ಚುನಾವಣೆಗೆ ಸೂರಜ್ ರೇವಣ್ಣ ಸ್ಪರ್ಧೆಗೆ ಬಿಜೆಪಿ-ಕಾಂಗ್ರೆಸ್ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್ ಪಕ್ಷ ಯಾವುದು..? ಅಲ್ಲಿ ಇಂಧಿರಾಗಾಂಧಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಬಂದಿದ್ದಾರೆ. ಯಡಿಯೂರಪ್ಪ ಅವರ ಮಕ್ಕಳು ರಾಜಕೀಯಕ್ಕೆ ಬಂದರು. ನಾವೇನು ಹಿಂದುಗಡೆ ಬಾಗಿಲಿನಿಂದ ಬರುತ್ತಿದ್ದೇವಾ ಎಂದು ವಾಗ್ದಾಳಿ ನಡೆಸಿದ್ದಾರೆ.
ರಿಸರ್ವೇಷನ್ ಇಲ್ಲದಿದ್ದಾಗ ಹಿಂದುಳಿದ ವರ್ಗದವರನ್ನು ಜಿಲ್ಲಾಪ ಪಂಚಾಯತ ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ಅವರೇನು ನಮ್ಮ ಕುಟುಂಬದವರಾ..? ಎಂದು ಪ್ರಶ್ನಿಸಿದ ಅವರು, ಜೆಡಿಎಸ್ ನಿಂದ ಅಧ್ಯಕ್ಷರನ್ನಾಗಿ ಮಾಡಿದವರ ಹೆಸರನ್ನು ಅವರು ಹೇಳಲಿ ಎಂದರು.
ಬೇಕಿದ್ದರೆ ನಮ್ಮನ್ನು ಟೀಕಿಸುವ ಕಾಂಗ್ರೆಸ್, ಬಿಜೆಪಿಯವರು ಕುಟುಂಬದಿಂದ ಒಬ್ಬರೇ ನಿಲ್ಲುವ ಕಾನೂನು ತರಲಿ. ಆ ಕಾನೂನನ್ನು ನಾನು ಒಪ್ಪುತ್ತೇನೆ. ಜೆಡಿಎಸ್ ಪ್ರೊಡಕ್ಷನ್ ಪಾರ್ಟಿ. ಕಾಂಗ್ರೆಸ್-ಬಿಜೆಪಿಯಲ್ಲಿರುವವರಲ್ಲಿ ಹೆಚ್ಚಿನವರು ದೇವೇಗೌಡರ ಕಂಪನೀಲಿ ಸರ್ವಿಸ್ ಆಗಿರುವವರು ಎಂದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement