ಪಾಕ್ ಎಫ್-16 ವಿಮಾನ ಹೊಡೆದುರುಳಿಸಿದ ಅಭಿನಂದನ್ ವರ್ಧಮಾನಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಬಾಲಕೋಟ ಹೀರೋ ಅಭಿನಂದನ್ ವರ್ಧಮಾನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೀರಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.
ಪುಲ್ವಾಮಾ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ವಾಯುಪಡೆಗಳ ನಡುವಿನ ವೈಮಾನಿಕ ಚಕಮಕಿಯಲ್ಲಿ ವರ್ಧಮಾನ್ ಪಾಕಿಸ್ತಾನದ ಯುದ್ಧವಿಮಾನ ಎಫ್-16 ಅನ್ನು ಹೊಡೆದುರುಳಿಸಿದ ನಂತರ ವರ್ಧಮಾನ್ ಅವರ MiG-21 ಯುದ್ಧ ವಿಮಾನ ಪಾಕ್ ಭೂಪ್ರದೇಶದಲ್ಲಿ ಇಳಿದಾಗ ಅವರನ್ನು ಪಾಕಿಸ್ತಾನ ಸೇನೆ ವಶಕ್ಕೆ ತೆಗೆದುಕೊಂಡಿತ್ತು.
ಈ ವಿಷಯದಲ್ಲಿ ಅಂತಾರಾಷ್ಟ್ರೀಯ ಹಸ್ತಕ್ಷೇಪದ ಜೊತೆಗೆ ಭಾರತದ ಒತ್ತಡದಿಂದಾಗಿ ಪಾಕಿಸ್ತಾನದ ಸೇನೆಯು ಅವರನ್ನು ಬಿಡುಗಡೆ ಮಾಡಿತ್ತು.
ಈ ನಡುವೆ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಭಿನಂದನ್ ವರ್ಧಮಾನ್ ಅವರಿಗೆ ವೀರಚಕ್ರ ಪ್ರಶಸ್ತಿ ಪ್ರದಾನ ಮಾಡಿದರು.

 

ಪ್ರಮುಖ ಸುದ್ದಿ :-   ವೀಡಿಯೊ..| ಭಾರತದ ಆಪರೇಶನ್‌ ಸಿಂಧೂರ ದಾಳಿ ನಂತ್ರ 2019ರ ʼಪುಲ್ವಾಮಾ ಭಯೋತ್ಪಾದಕ ದಾಳಿʼಯಲ್ಲಿ ತನ್ನ ಪಾತ್ರವಿದೆ ಎಂದು ಒಪ್ಪಿಕೊಂಡ ಪಾಕಿಸ್ತಾನ..!

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement