ಶಿರಸಿ ಪೊಲೀಸರ ಕಾರ್ಯಾಚರಣೆ; ಗಾಂಜಾ ಪೆಡ್ಲರ್ ಸೇರಿ 15 ಜನ ವಶಕ್ಕೆ

ಶಿರಸಿ: ಗಾಂಜಾ ಮಾರಾಟ ಹಾಗೂ ಸೇವನೆ ಆರೋಪದಲ್ಲಿ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ‌ ಡ್ರಗ್‌ ಪೆಡ್ಲಲರ್ ಸೇರಿದಂತೆ ವಿವಿಧ ಬಡಾವಣೆಯಿಂದ 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾನುವಾರ ಬೆಳಿಗ್ಗೆ ಪೊಲೀಸರು ಕಾರ್ಯಾಚರಣೆ ನಡೆಸಿ ಈ ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಡಿವೈಎಸ್ ಪಿ ರವಿ ಡಿ.ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ನಡೆದಿದ್ದು, ಶಿರಸಿ ನಗರದ ಕಸ್ತೂರಬಾ ನಗರ, ನೆಹರೂ ನಗರ ಸೇರಿದಂತೆ ವಿವಿಧೆಡೆಯಿಂದ ಯುವಕರನ್ನು ಗಾಂಜಾ ಸೇವನೆ ಹಾಗೂ ಮಾರಾಟದ ಆರೋಪದ ಮೇರೆಗೆ 15 ಯುವಕರನ್ನು ವಶಕ್ಕೆ ಪಡೆಯಲಾಗಿದೆ.
ಮುಂದಿನ ಕಾನೂನು ಪ್ರಕ್ರಿಯೆ ನಡೆಸಲು ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದ್ದು, ವೈದ್ಯಕೀಯ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ

advertisement