ಟೀಂ ಇಂಡಿಯಾ ಆಟಗಾರರಿಗೆ ‘ಹಲಾಲ್ ಮಾಂಸ’ ಕಡ್ಡಾಯ ವಿವಾದ: ಸ್ಪಷ್ಟನೆ ನೀಡಿದ ಬಿಸಿಸಿಐ

ನವದೆಹಲಿ: ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಮುಂಚಿತವಾಗಿ, ಆಟಗಾರರ ಡಯಟ್ ಚಾರ್ಟ್ ಕುರಿತ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಸುತ್ತೋಲೆಗೆ ಭಾರೀ ಟೀಕೆ ವ್ಯಕ್ತವಾಗಿದೆ.
ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡುತ್ತಿರುವ ವೈರಲ್ ಸುತ್ತೋಲೆಯ ಪ್ರಕಾರ, ಟೀಮ್ ಇಂಡಿಯಾ ಆಟಗಾರರು ಗೋಮಾಂಸ ಮತ್ತು ಹಂದಿ ಮಾಂಸವನ್ನ ತಿನ್ನುವುದನ್ನ ತಪ್ಪಿಸಲು ‘ಹಲಾಲ್ ಮಾಂಸ'(halal meat) ಕಡ್ಡಾಯಗೊಳಿಸಲಾಗಿದೆ ಎನ್ನಲಾಗಿದೆ. ಈ ಸುತ್ತೋಲೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿಸಿಐ ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿದ್ದಾರೆ.
ಏತನ್ಮಧ್ಯೆ, ಬೋರ್ಡ್ ಅಂತಹ ಯಾವುದೇ ಸುತ್ತೋಲೆ ಹೊರಡಿಸಿಲ್ಲ. ಸಸ್ಯಾಹಾರಿ ಅಥವಾ ಮಾಂಸಾಹಾರಿ ಆಹಾರ ಅಥವಾ ಹಲಾಲ್ ಮಾಂಸವನ್ನು ಸೇವಿಸುವುದು ಸಂಪೂರ್ಣವಾಗಿ ಆಟಗಾರನ ವೈಯಕ್ತಿಕ ಆಯ್ಕೆಯಾಗಿದೆ. ಮಂಡಳಿಯು ಯಾವುದೇ ಸೂಚನೆಗಳನ್ನು ನೀಡಿಲ್ಲ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರನ್ನು ಉಲ್ಲೇಖಿಸಿ ಎಬಿಪಿ ನ್ಯೂಸ್‌ ವರದಿ ಮಾಡಿದೆ.
ಆಹಾರ ಮೆನು ವಿವಾದ..?
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪ್ರಕಾರ, ಬಿಸಿಸಿಐ ಟೀಮ್ ಇಂಡಿಯಾದ ಆಟಗಾರರಿಗೆ ಆಹಾರ ಮೆನು ಬಿಡುಗಡೆ ಮಾಡಿದೆ. ಹಂದಿ ಮಾಂಸ ಹಾಗೂ ಗೋಮಾಂಸವನ್ನ ಈ ಮೆನುವಿನಿಂದ ಹೊರಗಿಡಲಾಯಿದೆ. ಮಾಂಸಾಹಾರಿ ಭಕ್ಷ್ಯಗಳಿಗೆ ಹಲಾಲ್ ಮಾಂಸದ ಬಳಕೆ ಎಂದು ಕೂಡ ಅದು ಉಲ್ಲೇಖಿಸಿದೆ ಎಂದು ವರದಿಯಾಗಿದೆ.

ಪ್ರಮುಖ ಸುದ್ದಿ :-   ಜೆಡಿಯು ಯುವ ಮುಖಂಡನ ಗುಂಡಿಕ್ಕಿ ಹತ್ಯೆ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement