ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕೆ.ಎಲ್ ರಾಹುಲ್ ಔಟ್‌

ಲಕ್ನೋ: ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಟೀಂ ಇಂಡಿಯಾದ ಆರಂಭಿಕ ಆಟಗಾರ ಕನ್ನಡಿಗ ಕೆ.ಎಲ್ ರಾಹುಲ್ ಹೊರ ಬಿದ್ದಿದ್ದಾರೆ.
ರಾಹುಲ್ ಟೀಂ ಇಂಡಿಯಾದ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು. ಆದರೆ ಅಭ್ಯಾಸದ ವೇಳೆ ಎಡ ತೊಡೆಯ ಸ್ನಾಯು ಸೆಳೆತದಿಂದಾಗಿ ರಾಹುಲ್ ಅಭ್ಯಾಸದಿಂದ ಹೊರಗುಳಿದಿದ್ದು, ಚೇತರಿಸಿಕೊಳ್ಳದ ಹಿನ್ನೆಲೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ ರಾಹುಲ್ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಕೆ.ಎಲ್‌. ರಾಹುಲ್‌ ಅವರು ಅಭ್ಯಾಸದ ವೇಳೆ ಎಡ ತೊಡೆಯ ಸ್ನಾಯು ಸೆಳೆತದಿಂದಾಗಿ ರಾಹುಲ್ ಅಭ್ಯಾಸದಿಂದ ಹೊರಗುಳಿದಿದ್ದು, ಅವರು ಚೇತರಿಸಿಕೊಳ್ಳದ ಹಿನ್ನೆಲೆ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿಯಿಂದ ರಾಹುಲ್ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ರಾಹುಲ್ ಟೆಸ್ಟ್ ಸರಣಿಯಿಂದ ಹೊರಗುಳಿದಿರುವುದರಿಂದ ಅವರ ಸ್ಥಾನಕ್ಕೆ ಸೂರ್ಯಕುಮಾರ್ ಯಾದವ್ ಅವರನ್ನು ಟೀಂ ಇಂಡಿಯಾ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ವಿರಾಟ್ ಕೊಹ್ಲಿ ಮೊದಲ ಪಂದ್ಯದಿಂದ ವಿಶ್ರಾಂತಿ ಪಡೆದಿದ್ದಾರೆ. ಎರಡನೇ ಪಂದ್ಯಕ್ಕೆ ಲಭ್ಯರಿದ್ದಾರೆ. ಇವರಿಬ್ಬರ ಅಲಭ್ಯತೆಯಲ್ಲಿ ಅಜಿಂಕ್ಯಾ ರಹಾನೆ ಮೊದಲನೇ ಟೆಸ್ಟ್ ನಲ್ಲಿ ನಾಯಕತ್ವ ನಿರ್ವಹಿಸಲಿದ್ದಾರೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟೆಸ್ಟ್ ಸರಣಿ ನವೆಂಬರ್ 25ಕ್ಕೆ ಆರಂಭಗೊಂಡು ಡಿಸೆಂಬರ್ 7ಕ್ಕೆ ಕೊನೆಗೊಳ್ಳಲಿದೆ. ನವೆಂಬರ್ 25 ರಿಂದ 29ರ ವರೆಗೆ ಕಾನ್ಪುರದಲ್ಲಿ ಮೊದಲ ಟೆಸ್ಟ್ ಪಂದ್ಯ ನಡೆದರೆ, ಮುಂಬೈನಲ್ಲಿ 2ನೇ ಟೆಸ್ಟ್ ಪಂದ್ಯಾಟ ಡಿಸೆಂಬರ್ 3 ರಿಂದ 7ರ ವರೆಗೆ ನಡೆಯಲಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ