ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಭೀತಿ..: ಕರ್ನಾಟಕದಲ್ಲಿ ನವೆಂಬರ್ 26ರಿಂದ ಮತ್ತೆ ಭಾರೀ ಮಳೆ ಮುನ್ಸೂಚನೆ..!

ಬೆಂಗಳೂರು: ಈಗ ಸುರಿಯುತ್ತಿರುವ ಮಳೆಗೆ ಈಗಾಗಲೇ ರಾಜ್ಯ ತತ್ತರಿಸಿದೆ. ಈಗ ರಾಜ್ಯಕ್ಕೆ ಈಗ ಮತ್ತೊಂದು ಶಾಕ್‌ ಎದುರಾಗಿದೆ. ನವೆಂಬರ್ 26ಕ್ಕೆ ಮತ್ತೆ ವರುಣನ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.
ನವೆಂಬರ್ 26ರಿಂದ ಡಿಸೆಂಬರ್ 15ರ ವರೆಗೆ ಮತ್ತೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದ ತಮಿಳುನಾಡು, ಕೇರಳ, ಆಂಧ್ರ ಪ್ರದೇಶದ ಕರಾವಳಿಯಲ್ಲಿ ಹೆಚ್ಚು ಮಳೆಯಾಗಲಿದ್ದು ಪುದುಚೆರಿ, ಈ ಹಿನ್ನೆಲೆಯಲ್ಲಿ ನವೆಂಬರ್ 26ರಿಂದ ರಾಜ್ಯದಲ್ಲಿಯೂ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಸದ್ಯ ವರುಣ ಕೊಂಚ ಬಿಡುವು ಕೊಟ್ಟಿದ್ದಾನೆ. ಮಳೆ ಸದ್ಯ ನಿಂತಿದ್ದು ಮಳೆಯ ಪರಿಣಾಮಕ್ಕೆ ಮುಕ್ತಿ ಸಿಕ್ಕಿಲ್ಲ. ಈ ನಡುವೆ ಈಗ ಮತ್ತೆ ನವೆಂಬರ್ 26 ರಿಂದ ಭಾರಿ ಮಳೆಯಾಗುವ ಮುನ್ಸೂಚನೆ ಮತ್ತೆ ಆತಂಕಕ್ಕೆ ಕಾರಣವಾಗಿದೆ.
ತಮಿಳುನಾಡಿನಲ್ಲಿ ಕಳೆದ ಎಂಟ್ಹತ್ತು ದಿನಗಳಿಂದಲೂ ವಿಪರೀತ ಮಳೆ ಸುರಿಯುತ್ತಿದೆ. ಆಂಧ್ರಪ್ರದೇಶ, ಕೇರಳ, ಪುದುಚೇರಿಯಲ್ಲೂ ಭಾರೀ ಮಳೆಯಾಗುತ್ತಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ