ಮುರ್ಡೇಶ್ವರ ದೇವಸ್ಥಾನಕ್ಕೆ ಹೆಚ್ಚಿನ ಭದ್ರತೆ, ಈಶ್ವರನ ಪ್ರತಿಮೆ ಚಿತ್ರ ವಿಕೃತಗೊಳಿಸಿ ಹರಿಬಿಟ್ಟವರ ಮೇಲೆ ಸೂಕ್ತ ಕ್ರಮ: ಅರಗ ಜ್ಞಾನೇಂದ್ರ

ಸಿದ್ದಾಪುರ: ಮುರ್ಡೇಶ್ವರ ದೇವಸ್ಥಾನದ ವಿಗ್ರಹ ಧ್ವಂಸಗೊಳಿಸಿ ಐಸಿಸ್ ಧ್ವಜ ನೆಟ್ಟ ಚಿತ್ರ ಹರಿಬಿಟ್ಟವರ ಕುರಿತು ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸಿದ್ದಾಪುರ ತಾಲೂಕಿನ ಕಲಗದ್ದೆ ಗ್ರಾಮಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುರುಡೇಶ್ವರ ದೇವಸ್ಥಾನಕ್ಕೂ ಭದ್ರತೆ ಹೆಚ್ಚಿಸಿದ್ದೇವೆ. ಜೊತೆಗೆ ರಾಜ್ಯದ ಕರಾವಳಿ ಭಾಗದಲ್ಲಿ ಭದ್ರತೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ನೆರವು ಕೇಳಿದ್ದೇವೆ. ಕರಾವಳಿ ಕಾವಲು ಪಡೆಗೆ 30 ಸುಸಜ್ಜಿತ ಬೋಟ್‌ಗಳ ಬೇಡಿಕೆ ಇಡಲಾಗಿದೆ ಎಂದು ತಿಳಿಸಿದರು.
ಭಟ್ಕಳವೂ ಸೇರಿದಂತೆ ರಾಜ್ಯದ ಕರಾವಳಿ ಭಾಗದ ಹಲವು ಯುವಕರು ದೇಶದ್ರೋಹ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಿರುವ ಸಂಶಯವಿದ್ದು, ಈ ಬಗ್ಗೆ ನಿಗಾ ವಹಿಸಲಾಗಿದೆ. ಮೋದಿ ಸರ್ಕಾರ ಬಂದ ಮೇಲೆ ಬಾಂಬ್ ಸ್ಫೋಟದಂತಹ ಪ್ರಕರಣಗಳು ತಗ್ಗಿದೆ ಎಂದರು. ಎಸ್.ಡಿ.ಪಿ.ಐ., ಪಿ.ಎಫ್.ಐ. ಸಂಘಟನೆ ನಿಷೇಧಿಸುವ ನಿರ್ಧಾರ ಕೇಂದ್ರ ಸರ್ಕಾರಕ್ಕೆ ಬಿಟ್ಟಿದ್ದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕಾಂಗ್ರೆಸ್ ನಮ್ಮ ವಿರೋಧಿ. ಅವರಿಗಿಂತ ಜೆಡಿಎಸ್ ನವರು ಹತ್ತಿರದವರು. ಅವರ ಅಭ್ಯರ್ಥಿ ಇಲ್ಲದ ಕಡೆ ಬೆಂಬಲ ಪಡೆದರೆ ತಪ್ಪೇನಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಬಿಜೆಪಿ-ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಕಾಂಗ್ರೆಸ್ ಆರೋಪಕ್ಕೆ ಈ ರೀತಿ ಸಮರ್ಥನೆ ನೀಡಿದ್ದಾರೆ.
ಕಾಂಗ್ರೆಸ್ ಗೆ ಒಳ ಒಪ್ಪಂದ ಮಾಡಿಕೊಂಡ ರೂಢಿ ಇದೆ. ನಾವು ಅವರ ರೀತಿಯಲ್ಲಿ ಸಾಗುವುದಿಲ್ಲ. ನಮಗೆ ಕಾಂಗ್ರೆಸ್ ಸೋಲಿಸುವದಷ್ಟೆ ಗುರಿ. ಜೆಡಿಎಸ್ ಅಭ್ಯರ್ಥಿ ಇಲ್ಲದ ಕಡೆ ಅವರ ಬೆಂಬಲ ಪಡೆದು ಹೆಚ್ಚು ಲೀಡ್ ಪಡೆಯುತ್ತೇವೆ’ ಎಂದರು.

ಪ್ರಮುಖ ಸುದ್ದಿ :-   ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ


.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement