ಭಟ್ಕಳ: ಹೆಬ್ಬಾವು ಕಚ್ಚಿದ್ದಕ್ಕೆ ಹಾವು ಹಿಡಿದುಕೊಂಡೇ ಆಸ್ಪತ್ರೆಗೆ ಬಂದು ದಾಖಲಾದ ವ್ಯಕ್ತಿ..!

ಭಟ್ಕಳ: ಹೆಬ್ಬಾವು ಕಚ್ಚಿದ್ದಕ್ಕೆ ಅದನ್ನು ಹಿಡಿದು ಹೆಬ್ಬಾವು ಸಮೇತ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿರುವ ಘಟನೆ ಸೋಮವಾರ ರಾತ್ರಿ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಹೀಗೆ ಹೆಬ್ಬಾವು ಹಿಡಿದು ಹಾವಿನ ಸಮೇತ ಆಸ್ಪತ್ರೆಗೆ ಬಂದ ವ್ಯಕ್ತಿಯನ್ನು ಮಣ್ಕುಳಿ ಸೀತಾರಾಮ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.
ಭಟ್ಕಳದಲ್ಲಿ ಕೆಲದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ ಹೆಬ್ಬಾವೊಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಇರುವ ವ್ಯಕ್ತಿ ಒಬ್ಬರ ಮನೆಯ ಪಕ್ಕಕ್ಕೆ ಬಂದು ಸೇರಿಕೊಂಡಿದೆ. ಅದನ್ನು ನೋಡಿದ ಸೀತಾರಾಮ ನಾಯ್ಕ ಇದು ರಸ್ತೆಯಲ್ಲಿ ಹೋಗುವ ಮತ್ಯಾರಿಗಾದರೂಅಪಾಯ ಮಾಡಿದರೆ ಎಂದು ತಿಳಿದು ತನ್ನ ಸ್ನೇಹಿತರ ಸಹಾಯದಿಂದ ಹಾವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ.
ಈ ವೇಳೆ ಸೀತಾರಾಮ ನಾಯ್ಕ ಅವರಿಗೆ ಹಾವು ಕಚ್ಚಿದೆ. ಹೆಬ್ಬಾವಿನಿಂದ ಕಚ್ಚಿಸಿಕೊಂಡರೂ ವಿಚಲಿತಗೊಳ್ಳದೆ, ಏಳೆಂಟು ಅಡಿ ಉದ್ದದ ಹೆಬ್ಬಾವವನ್ನು ತಮ್ಮ ಸ್ನೇಹಿತರ ಸಹಾಯದೊಂದಿಗೆ ಹಿಡಿದು ನಂತರ ಹಾವಿನ ಸಮೇತವೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಬಂದು ಹಾವನ್ನು ತೆಗೆದುಕೊಂಡು ಹೋಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರೆ. ಸೀತಾರಾಮ ಅವರಿಗೆ ಭಟ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement