ಮಳೆಯಿಂದ ಬೆಳೆಹಾನಿ ವರದಿ ಕೈಸೇರಿದ 24 ಗಂಟೆಯಲ್ಲೇ ಬೆಳೆ ಪರಿಹಾರ ಬಿಡುಗಡೆಗೆ ಸೂಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು : ಭಾರೀ ಮಳೆಯಿಂದಾಗಿ ಬೆಳೆ ಕಳೆದುಕೊಂಡ ರೈತ ಸಮುದಾಯಕ್ಕೆ ಬೆಳೆ ನಷ್ಟ ವರದಿ ಕೈಸೇರಿದ 24 ಗಂಟೆಯಲ್ಲೇ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ವಿವಿಧೆಡೆ ಮಳೆಯಿಂದ ಅಪಾರ ಪ್ರಮಾಣದ ಆಸ್ತಿ, ಬೆಳೆ ಹಾನಿ ಆಗಿದೆ. ಈ ಸಂಬಂಧ ಮುಂದಿನ 24 ಗಂಟೆಯಲ್ಲೇ ರೈತರಿಗೆ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ರೂ. ಪರಿಹಾರ ನೀಡಲು ಆದೇಶಿಸಲಾಗಿದ್ದು ತಕ್ಷಣಕ್ಕೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಸೂಚನೆ ಕೊಡಲಾಗಿದೆ ಎಂದರು.

ಮಳೆಯಿಂದ ಸಂಭವಿಸಿರುವ ಬೆಳೆ ಹಾಗೂ ಇತರ ಹಾನಿಯ ಸಮೀಕ್ಷೆಯನ್ನು ತ್ವರಿತವಾಗಿ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೆಳೆ ನಷ್ಟ ಸಮೀಕ್ಷೆ ವರದಿ ಪರಿಹಾರ ಆಪ್‌ಗೆ ಸಲ್ಲಿಕೆಯಾದ 24 ತಾಸಿನಲ್ಲಿ ಪರಿಹಾರದ ಮೊತ್ತವನ್ನು ರೈತರಿಗೆ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ
ಯಲಹಂಕದಲ್ಲಿ ಭಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಯಲಹಂಕ ವಲಯದ ಕೇಂಪೇಗೌಡ ವಾರ್ಡನಲ್ಲಿ ಜಲಾವೃತಗೊಂಡಿದ್ದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ ಭವಿಷ್ಯದಲ್ಲಿ ಇಂತಹ ಅನಾಹುತ ನಡೆಯದಂತೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.
ಸ್ಥಳೀಯ ಶಾಸಕ ಎಸ್.ಆರ್.ವಿಶ್ವನಾಥ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ವಲಯ ಆಯುಕ್ತ ದಯಾನಂದ್, ಜಂಟಿ ಆಯುಕ್ತರಾದ ಪೂರ್ಣಿಮಾ ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದ ಅತಿ ಹೆಚ್ಚು ಮಳೆಯಾಗಿದೆ. ಯಲಹಂಕ ಕೆರೆ ಕೋಡಿ ಹರಿದು ಆ ನೀರು ಅಪಾರ್ಟ್‌ಮೆಂಟ್‌ಗೆ ನುಗ್ಗಿದೆ. ಯಲಹಂಕ ಶಾಸಕರು ಸ್ಥಳಕ್ಕೆ ಆಗಮಿಸಿ ಜನರಿಗೆ ಸಂಪೂರ್ಣ ಸಹಾಯ ಮಾಡಿದ್ದಾರೆ. ಇದಕ್ಕೆ ಪರಿಹಾರ ಕೊಡುವ ಬಗ್ಗೆ ಚರ್ಚೆ ಮಾಡಿದ್ದೀನಿ. ಇಲ್ಲಿ ಹನ್ನೊಂದು ಕೆರೆಗಳು ಯಲಹಂಕಕ್ಕೆ ಸೇರುತ್ತದೆ ಎಂದು ಹೇಳಿದರು.

ರಾಜಕಾಲುವೆ ಅಗಲೀಕರಣಕ್ಕೆ ಸಿಎಂ ಸೂಚನೆ
ಇನ್ನು ಯಲಹಂಕ ಕೆರೆ ದೊಡ್ಡದಿದ್ದು, ಅದರ ಹೊರ ಹರಿವೂ ಕೂಡ ಸಾಮಾನ್ಯವಾಗಿ ದೊಡ್ಡ ಪ್ರಮಾಣದಲ್ಲಿರುತ್ತದೆ. ಹೊರ ಹರಿವು ಕೂಡ ದೊಡ್ಡ ಪ್ರಮಾಣದಲ್ಲಿದ್ದು, ಹೀಗಾಗಿ ರಾಜಕಾಲುವೆ ಸಾಮರ್ಥ್ಯ ಸಾಲುತ್ತಿಲ್ಲ. ಅಲ್ಲದೆ ರಾಜಕಾಲುವೆ ಅತಿಕ್ರಮಣ ಆಗಿರುವುದೂ ಕೂಡ ಜನನಿವಾಸ ಪ್ರದೇಶಗಳು ಜಲಾವೃತವಾಗಲು ಕಾರಣವಾಗುತ್ತಿದೆ. ಆದ್ದರಿಂದ ಮಳೆ ನಿಂತ ತಕ್ಷಣವೇ ರಾಜಕಾಲುವೆ ಅಗಲೀಕರಣ ಮಾಡಲು ಸೂಚಿಸಿದ್ದೇನೆ. ರಾಜಕಾಲುವೆ ಅಗಲೀಕರಣಕ್ಕೆ ಎಲ್ಲೆಲ್ಲಿ ಅಡಚಣೆ ಇದೆ ಆ ಜಾಗದ ಮಾಲೀಕರೊಂದಿಗೆ ಮಾತನಾಡಿ, ಟಿಡಿಆರ್ ನೀಡುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

ಜವಾಹರಲಾಲ್ ನೆಹರು ಸಂಸ್ಥೆಗೂ ಸಿಎಂ ಭೇಟಿ
ಬಳಿಕ ಕಳೆದ ಕೆಲವು ದಿನಗಳ ಭಾರಿ ಮಳೆಗೆ ಜಲಾವೃತವಾಗಿದ್ದ ಬೆಂಗಳೂರಿನ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್‌ಡ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೂ ಭೇಟಿ ನೀಡಿ ಪರಿಶೀಲಿಸಿ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement