ಶಿಕ್ಷಕರಿಗೆ ಒಳ್ಳೆಯ ಸುದ್ದಿ : ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಸರ್ಕಾರದ ಗ್ರೀನ್ ಸಿಗ್ನಲ್

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಶೇಕಡಾವಾರು ಮಿತಿ ಲೆಕ್ಕಾಚಾರ ಮೇಲೆ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ‌ ಸಂಖ್ಯೆಯ ಆಧಾರದ ಮೇಲೆ ಶೇಕಡಾವಾರು ಮಿತಿಯಂತೆ ಈ ನಿರ್ಧಾರ ತಿಳಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ನಡೆದಿರಲಿಲ್ಲ. ಈಗ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯ ಸರ್ಕಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ 2020-21ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸಲಾಗಿತ್ತು. ಆದರೆ ವರ್ಗಾವಣೆ ಮಿತಿಯ ಗೊಂದಲದಿಂದಾಗಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತಗೊಳಿಲಾಗಿತ್ತು. ಇದೀಗ ಮಂಜೂರು ಹುದ್ದೆಗಳ ಸಂಖ್ಯೆಯ ಆಧಾರ ಮೇಲೆ ಶೇಕಡವಾರು ಮಿತಿಯಲ್ಲಿ ವರ್ಗಾವಣೆ ಪ್ರಕ್ರಿಯೆ ಪುನರಾರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದು, ಅಧಿಸೂಚನೆಯ ದಿನಾಂಕಕ್ಕೆ ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆಯ ಆಧಾರದ ಮೇಲೆ ಶೇಕಡವಾರು ಮಿತಿಯನ್ನು ಲೆಕ್ಕಾಚಾರ ಮಾಡಿ, ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರೆಸುವಂತೆ ಸೂಚಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement