ಸಂಸತ್ ಅಧಿವೇಶನ; ನವೆಂಬರ್‌ 28ರಂದು ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ (ನವೆಂಬರ್ 28) ಸರ್ವಪಕ್ಷ ಸಭೆ ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ..
ನವೆಂಬರ್ ೨೯ ರಿಂದ ಡಿಸೆಂಬರ್ ೨೩ ತನಕ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದ್ದು ಸುಗಮ ಕಲಾಪ ನಡೆಯಲು ಸಹಕಾರ ನೀಡುವಂತೆ ಸರ್ವ ಪಕ್ಷಗಳ ನಾಯಕರಿಗೆ ಮೋದಿ ಮನವಿ ಮಾಡಲಿದ್ದಾರೆ ಎನ್ನಲಾಘಿದೆ.
ಭಾನುವಾರ ( ನವೆಂಬರ್‌ ೨೮ರಂದು) ಬೆಳಿಗ್ಗೆ ೧೧ ಗಂಟೆಗೆ ಪ್ರ ಸರ್ವ ಪಕ್ಷಗಳ ನಾಯಕರ ಸಭೆ ನಡೆಯಲಿದೆ. ಅಲ್ಲದೆ, ಅಂದು ೩ ಗಂಟೆಗೆ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ ಸಚಿವ ಪ್ರಹ್ಲಾದ ಜೋಶಿ ಎಂದು ತಿಳಿಸಿದ್ದಾರೆ.
ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರಕಾರ ಹಿಂದಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಸರ್ವ ಪಕ್ಷಗಳ ನಾಯಕರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ವಿವರ ನೀಡುವ ಸಾಧ್ಯತೆಗಳಿವೆ.
ಉಭಯ ಪೀಠಾಧ್ಯಕ್ಷರ ಸಭೆ
ಸಂಸತ್ತಿನ ಉಭಯ ಕಲಾಪಗಳು ಸುಗಮವಾಗಿ ನಡೆಯಬೇಕು ಎನ್ನುವ ಹಿನ್ನೆಲೆಯಲ್ಲಿ ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಮತ್ತು ರಾಜ್ಯಸಭೆ ಸಭಾಪತಿ ಎನ್ ವೆಂಕಯ್ಯ ನಾಯ್ಡು ಪ್ರತ್ಯೇಕವಾಗಿ ಉಭಯ ಸದನಗಳ ನಾಯಕರು ಸೇರಿದಂತೆ ರಾಜಕೀಯ ಪಕ್ಷಗಳ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ಸುಗಮ ಕಲಾಪ ನಡೆಸಲು ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ಶಿಮ್ಲಾದಲ್ಲಿ ನಡೆದ 82ನೇ ಅಖಿಲ ಭಾರತ ಪೀಠಸೀನಾಧಿಕಾರಿಗಳ ಸಭೆಯಲ್ಲಿ ಸುಗಮ ಕಲಾಪ ನಡೆಸುವ ಸಂಬಂಧ ಅನುಸರಿಸಬೇಕಾದ ಕ್ರಮಗಳ ಕುರಿತಂತೆ ಚರ್ಚೆ ನಡೆಸಿದ್ದು ಈ ಬಾರಿಯ ಅಧಿವೇಶನದಲ್ಲಿ ಅದನ್ನು ಮಾಡಲು ನಿರ್ಧರಿಸಲಾಗಿದೆ.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement