ನೆರೆ ಸಂತ್ರಸ್ತರಿಗೆ ತುರ್ತು ಪರಿಹಾರ ಬಿಡುಗಡೆಗೆ 418.72 ಕೋಟಿ ರೂ ಹಣ ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ನೆರೆ, ಪ್ರವಾಹದಿಂದ ಸಂತ್ರಸ್ತರಾದವರ ನೆರವಿಗೆ ಧಾವಿಸಿರುವ ಸರ್ಕಾರ, ಕೂಡಲೇ ತುರ್ತು ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಇದಕ್ಕಾಗಿ 418.72 ಕೋಟಿ ರೂ ಹಣ ಬಿಡುಗಡೆ ಮಾಡಿದೆ.
ಈ ಕುರಿತು ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದು, ಮನೆ ಹಾನಿ ಪರಿಹಾರ ನೀಡುವಂತೆ ಎಸ್ ಡಿ ಆರ್ ಎಫ್ ನಿಧಿಯಿಂದ 418.72 ಕೋಟಿ ರೂಪಾಯಿ ಬಿಡುಗಡೆ ಆದೇಶಿಸಿದೆ.
ಬೆಂಗLಊರಲ್ಲಿ ಹಾನಿ ಪ್ರದೇಶಗಳಿಗೆ ಸಿಎಂ ಭೇಟಿ: ಬೆಂಗಳೂರಿನ ಯಲಹಂಕ ಪ್ರದೇಶದಲ್ಲಿ ನೀರು ನುಗ್ಗಿರುವ ಮನೆಗಳಿಗೆ 10 ಸಾವಿರ ರೂ., ಸಂಪೂರ್ಣ ಹಾನಿಯಾಗಿರುವ ಮನೆಗಳಿಗೆ 5 ಲಕ್ಷ ರೂ.ಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಹಾನಿಯಾಗಿರುವ ಮನೆಗಳಿಗೆ 1 ಲಕ್ಷ ರೂ.ಗಳ ತುರ್ತು ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಇಂದು ಬೆಳಿಗ್ಗೆ ಜಲಾವೃತವಾಗಿರುವ ಯಲಹಂಕದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಸಮುಚ್ಚಯಕ್ಕೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಪೈಕಿ ನೀರು ನುಗ್ಗಿರುವ ಮನೆಗಳಿಗೆ 10.ಸಾವಿರ ರೂ.ಗಳನ್ನು ಇಂದೇ ಬಿಡುಗಡೆ ಮಾಡಲು ಆದೇಶಿಸಲಾಗಿದೆ. ಯಲಹಂಕ ಪ್ರದೇಶದಲ್ಲಿ 400 ಮನೆಗಳಿಗೆ ಹಾನಿಯಾಗಿದೆ. 10 ಕಿ.ಮೀ ಮುಖ್ಯರಸ್ತೆ , 20 ಕಿ.ಮೀ ಇತರೆ ರಸ್ತೆಗಳು ಹಾನಿಯಾಗಿದೆ. ಮೂಲಭೂತ ಸೌಕರ್ಯಗಳ ದುರಸ್ತಿಗೆ ಅಗತ್ಯವಿರುವ ಅನುದಾನದ ಅಂದಾಜು ಮಾಡಿಲು ಸೂಚನೆ ನೀಡಿದ್ದು, ತಕ್ಷಣವೇ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ರಾಜಕಾಲುವೆಗಳ ಸಮಸ್ಯೆಯಿದ್ದು, 50.ಕಿಮೀನಷ್ಟು ರಾಜಕಾಲುವೆ ಅಗಲೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement