ಮುಖೇಶ​ ಅಂಬಾನಿ ಹಿಂದಿಕ್ಕಿ ಏಷ್ಯಾದ ನಂಬರ್ 1 ಶ್ರೀಮಂತನಾದ ಗೌತಮ್ ಅದಾನಿ..!

ಮುಂಬೈ: ಶ್ರೀಮಂತಿಕೆಯಲ್ಲಿ ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ ಅಂಬಾನಿ ಅವರನ್ನು ಇದೇ ಮೊದಲ ಬಾರಿಗೆ ಹಿಂದಿಕ್ಕಿದ್ದಾರೆ.
ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ ಅವರನ್ನು ಬುಧವಾರದಂದು ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಗೌತಮ್‌ ಅದಾನಿ ಅವರು ಹಿಂದಿಕ್ಕಿ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಬ್ಲೂಮ್‌ಬರ್ಗ್ ಬಿಲಿಯನೇರ್ ಸೂಚ್ಯಂಕದ ಪ್ರಕಾರ, ಮಂಗಳವಾರ (ನವೆಂಬರ್ 23) ಅದಾನಿ ಅವರ ಸಂಪತ್ತು 88.8 ಬಿಲಿಯನ್ ಡಾಲರ್‌ಗಳಷ್ಟಿತ್ತು. ಮತ್ತೊಂದೆಡೆ, ಮುಕೇಶ್ ಅಂಬಾನಿಯ ನಿವ್ವಳ ಸಂಪತ್ತು 91 ಬಿಲಿಯನ್ ಡಾಲರ್ ಆಗಿತ್ತು. ಆದರೆ ಬುಧವಾರ (ನವೆಂಬರ್ 24) ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಷೇರುಗಳು ಶೇ 1.77ರಷ್ಟು ಕುಸಿದಿದ್ದು, ಇದೇ ವೇಳೆ ಅದಾನಿ ಷೇರುಗಳು ಶೇ 2.34ರಷ್ಟು ಜಿಗಿದವು. ಇದರಿಂದ ಅದಾನಿ ಭಾರತದ ಹಾಗೂ ಏಶಿಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿದ್ದಾರೆ.
ಸದ್ಯಕ್ಕೆ, ಅದಾನಿ ಸಮೂಹವು ಅದಾನಿ ಎಂಟರ್‌ಪ್ರೈಸಸ್, ಅದಾನಿ ಗ್ರೀನ್ ಎನರ್ಜಿ, ಅದಾನಿ ಪೋರ್ಟ್ಸ್ ಮತ್ತು ಎಸ್‌ಇಜೆಡ್, ಅದಾನಿ ಟ್ರಾನ್ಸ್‌ಮಿಷನ್, ಅದಾನಿ ಟೋಟಲ್ ಗ್ಯಾಸ್ ಮತ್ತು ಅದಾನಿ ಪವರ್ ಸೇರಿದಂತೆ ಹಲವಾರು ಕಂಪೆನಿಗಳನ್ನು ನಿರ್ವಹಿಸುತ್ತಿದೆ. ಗೌತಮ್ ಅದಾನಿ ಅವರ ಸಂಪತ್ತು ವಿಶೇಷವಾಗಿ ಕೊರೊನಾ ಸಾಂಕ್ರಾಮಿಕ ರೋಗದ ನಂತರ ಬಹಳ ಹೆಚ್ಚಾಗಿದೆ. ಮಾರ್ಚ್ 18, 2020ರಂದು ಅವರ ಒಟ್ಟು ಸಂಪತ್ತು ಸುಮಾರು 4.91 ಶತಕೋಟಿ ಅಮೆರಿಕನ್ ಡಾಲರ್​ನಷ್ಟಿತ್ತು. ಈಗ ಅವರ ನಿವ್ವಳ ಸಂಪತ್ತು ಸುಮಾರು 90 ಶತಕೋಟಿ ಡಾಲರ್ ಮುಟ್ಟಿದೆ – ಅಂದರೆ ಶೇ 1800ಕ್ಕಿಂತ ಹೆಚ್ಚು ಏರಿಕೆಯಾಗಿದೆ.
ಮತ್ತೊಂದೆಡೆ, ರಿಲಯನ್ಸ್ ಇಂಡಸ್ಟ್ರೀಸ್ ಸೌದಿ ಅರೇಬಿಯಾದ ಸಾರ್ವಜನಿಕ ಪೆಟ್ರೋಲಿಯಂ ಮತ್ತು ನೈಸರ್ಗಿಲ ಅನಿಲ ಕಂಪೆನಿಯಾದ ಧಹ್ರಾನ್‌ನಲ್ಲಿರುವ ಅರಾಮ್ಕೊ ಜತೆಗಿನ ಒಪ್ಪಂದವನ್ನು ರದ್ದುಗೊಳಿಸಿದ ನಂತರ ಮುಖೇಶ ಅಂಬಾನಿ ಅವರ ನಿವ್ವಳ ಸಂಪತ್ತಿಗೆ ಸ್ವಲ್ಪ ಮಟ್ಟಿಗೆ ಕುಸಿತ ಕಂಡಿದೆ.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement