ಶಿರಸಿ ಗಾಂಜಾ ಪ್ರಕರಣ: 12 ಜನರು ಸೇವೆ ಮಾಡಿದ್ದು ವೈದ್ಯಕೀಯ ಪರೀಕ್ಷೆಯಿಂದ ದೃಢ..!

posted in: ರಾಜ್ಯ | 0

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಗಾಂಜಾ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರಸಿ ಪೊಲೀಸರು ಕಳೆದ ಎರಡು ದಿನದ ಹಿಂದೆ ನಗರದ ವಿವಿಧ ಭಾಗದಲ್ಲಿ ದಾಳಿ ನಡೆಸಿ 15 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ವಿಜ್ಞಾನ ಪರೀಕ್ಷೆಗೆ ಒಳಪಡಿಸಿದ್ದರು. ಈಗ ಅದರ ವರದಿ ಬಂದಿದ್ದು, ಅವರಲ್ಲಿ 12 ಜನರು ಗಾಂಜಾ ಸೇವನೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢವಾಗಿದೆ.
ಗಾಂಜಾ ಸೇವನೆ ಮತ್ತು ಪೆಡ್ಲರ್ ಪ್ರಕರಣ ಸಂಬಂಧ ಶಿರಸಿ ಮಾರುಕಟ್ಟೆ ಪೊಲೀಸರು 15 ಜನರನ್ನು ವೈದ್ಯಕೀಯ ತಪಾಸಣೆಗೆ ಮಣಿಪಾಲ ಆಸ್ಪತ್ರೆಗೆ ಕಳಿಸಿಕೊಟ್ಟಿದ್ದರು. ಅವರಲ್ಲಿ 12 ಜನರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವ ಕಾರಣ ಶಿರಸಿಯಲ್ಲಿ ಗಾಂಜಾ ಮಾರಾಟ ಹಾಗೂ ಸೇವನೆ ಹೆಚ್ಚುತ್ತಿದೆ ಎಂಬ ಅನುಮಾನ ನಿಜವಾಗಿದೆ.
ಕಳೆದ ಮೂರು ತಿಂಗಳಿಂದ ಶಿರಸಿ ಶಾಲಾ, ಕಾಲೇಜುಗಳ ಕ್ರೀಡಾಂಗಣ, ಬಸ್ ನಿಲ್ದಾಣಗಳಲ್ಲಿ ಗಾಂಜಾ ಮಾರಾಟ ಮಾಡುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಹಲವರನ್ನು ಬಂಧಿಸಿದ್ದರು. ಶಾಲಾ ,ಕಾಲೇಜು ವಿದ್ಯಾರ್ಥಿಗಳೇ ಇವರ ಗುರಿಯಾಗಿದ್ದರು. ಈವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಎರಡು ದಿನದ ಹಿಂದೆ ಬೆಳಂಬೆಳಗ್ಗೆ ವಿವಿಧೆಡೆ ದಾಳಿ ನಡೆಸಿ 15 ಜನರನ್ನು ವಶಕ್ಕೆ ಪಡೆದಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ