ಶಿವನಮೂರ್ತಿ ಮೇಲೆ ಐಸಿಸ್‌ ಕರಿ ನೆರಳು:ಮುರುಡೇಶ್ವರ ದೇವಸ್ಥಾನಕ್ಕೆ ಬಿಗಿ ಭದ್ರತೆ

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವಿಶ್ವ ಪ್ರಸಿದ್ದ ಧಾರ್ಮಿಕ ಮತ್ತು ಪ್ರವಾಸಿ ತಾಣವಾದ ಮುರ್ಡೇಶ್ವರದ ಮೇಲೆ ಐಸಿಸ್ (ISIS) ಉಗ್ರ ಸಂಘಟನೆ ಕಣ್ಣು ಬಿದ್ದಿರುವ ಶಂಕೆಯ ಮೇಲೆ ಮುರುಡೇಶ್ವರ ದೇಗುಲಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದ ಶಿವನ ಮೂರ್ತಿಯ ಚಿತ್ರವನ್ನು ವಿರೂಪಗೊಳಿಸಿ ಐಸಿಸ್‍ನ ಪತ್ರಿಕೆ ದಿ ವಾಯ್ಸ್ ಆಫ್‌ ಹಿಂದ್ ನಲ್ಲಿ ಪ್ರಕಟವಾಗುತಿದ್ದಂತೆ ಎಚ್ಚೆತ್ತ ಪೊಲೀಸ್‌ ಇಲಾಖೆ ಮುರುಡೇಶ್ವರ ದೇವಸ್ಥಾನಕ್ಕೆ ಬಿಗಿ ಭದ್ರತೆ ಒದಗಿಸಿದೆ.
ಮುರುಡೇಶ್ವರದಲ್ಲಿರುವ ಶಿವನ ಪ್ರತಿಮೆಯ ಪೋಟೋವನ್ನ ವಿರೂಪಗೊಳಿಸಿ ಐಸಿಸ್ ಮುಖವಾಣಿ ದಿ ವೈಸ್ ಆಪ್ ಹಿಂದ್ ನಲ್ಲಿ ಈ ರೀತಿಯಾಗಿ ಪ್ರಕಟವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹರಿದಾಡತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಗೃಹ ಇಲಾಖೆ ಸೂಚನೆ ಮೇರೆಗೆ ಮುರ್ಡೇಶ್ವರಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮುರ್ಡೇಶ್ವರ ಆಸುಪಾಸಿನ ಪ್ರದೇಶಗಳಲ್ಲಿ ಪೊಲೀಸರನ್ನ ನಿಯೋಜಿಸಲಾಗಿದೆ.
ಬುಧವಾರದಿಂದ ಜಾರಿಗೆ ಬರುವಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಒಂದು ಪೊಲೀಸ್ ತುಕಡಿ ನಿಯೋಜನೆ ಮಾಡಿದ್ದು, ದೇವಸ್ಥಾನದ ಒಳಭಾಗದಲ್ಲಿ ಎಎಸ್ಐ ಸೆರಿದಂತೆ ಹತ್ತು ಪೊಲೀಸರನ್ನು ಭದ್ರತೆ ಹಾಗೂ ಬರುವ ಭಕ್ತರ ತಪಾಸಣೆಗೆ ನಿಯೋಜನೆ ಮಾಡಲಾಗಿದೆ. ಮಂಗಳವಾರ ಸಿದ್ದಾಪುರ ತಾಲೂಕಿನ ಕಲಗದ್ದೆ ಗ್ರಾಮಕ್ಕೆ ಮಂಗಳವಾರ ನೀಡಿದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಮುರುಡೇಶ್ವರ ದೇವಸ್ಥಾನಕ್ಕೆ ಭದ್ರತೆ ಹೆಚ್ಚಿಸಲಾಗುವುದು ಎಂದು ಹೇಳಿದ್ದರು. ಅದರ ನಂತರ ಭದ್ರತೆ ಹೆಚ್ಚಿಸಲಾಗಿದೆ.
ಶಿವನ ವಿಗ್ರಹ ವಿರೂಪಗೊಳಿಸಿ ಪ್ರಕಟಿಸಿದ್ದಕ್ಕೆ ಮುರುಡೇಶ್ವರದಲ್ಲಿ ಐಸಿಸ್ ಪ್ರತಿಕೃತಿ ದಹನ ಮಾಡಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಲಾಯಿತು. ಭಟ್ಕಳ, ಕುಮಟಾ ಶಾಸಕರು ಸಹ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ