ಸಂಸದ-ಮಾಜಿ ಕ್ರಿಕೆಟಿಗ ಗೌತಮ್ ಗಂಭೀರಗೆ ಐಸಿಸ್​​ ಕಾಶ್ಮೀರದಿಂದ ಜೀವ ಬೆದರಿಕೆ

ನವದೆಹಲಿ: ‘ಐಸಿಸ್ ಕಾಶ್ಮೀರ’ದಿಂದ ತನಗೆ ಜೀವ ಬೆದರಿಕೆ ಇದೆ ಎಂದು ದೆಹಲಿಯ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಮತ್ತು ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ.
ಗಂಭೀರ್ ದೆಹಲಿ ಪೊಲೀಸರನ್ನು ಸಂಪರ್ಕಿಸಿದ್ದಾರೆ, ಹಾಗೂ ಅದರ ನಂತರ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕೊಲೆ ಬೆದರಿಕೆಯ ಕುರಿತು ತನಿಖೆ ನಡೆಯುತ್ತಿದೆ ಎಂದು ಕೇಂದ್ರ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ.
“ಗೌತಮ್ ಗಂಭೀರ್ ಅವರಿಗೆ ಇ-ಮೇಲ್ ಮೂಲಕ ‘ಐಸಿಸ್ ಕಾಶ್ಮೀರ’ದಿಂದ ಕೊಲೆ ಬೆದರಿಕೆಗಳು ಬಂದಿವೆ ಎಂದು ತಿಳಿಸಿದ್ದಾರೆ. ಹೀಗಾಗಿ ಗಂಭೀರ್ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಕೇಂದ್ರ ಜಿಲ್ಲೆಯ ಡಿಸಿಪಿ ಶ್ವೇತಾ ಚೌಹಾಣ್ ತಿಳಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಪೊಲೀಸರಿಗೆ ಬರೆದ ಪತ್ರದಲ್ಲಿ ಗೌತಮ್‌ ಗಂಭೀರ್ ಅವರು ಇ ಮೇಲ್‌ನ ವಿವರಗಳನ್ನು ಬಹಿರಂಗಪಡಿಸಿದ್ದಾರೆ, ಇದು ಐಸಿಸ್ ಕಾಶ್ಮೀರದಿಂದ ಕಳುಹಿಸಲ್ಪಟ್ಟಿದೆ ಎಂದು ಅವರು ಹೇಳಿದ್ದಾರೆ. ಭಯೋತ್ಪಾದಕ ಗುಂಪು ಅವನನ್ನು ಮತ್ತು ಅವನ ಕುಟುಂಬವನ್ನು ಕೊಲ್ಲಲು ಹೊರಟಿದೆ ಎಂದು ಅದು ಇ ಮೇಲ್‌ ಹೇಳಿದೆ.
ಬಿಜೆಪಿ ಸಂಸದ ಗೌತಮ್‌ ಗಂಭೀರ ಪಾಕಿಸ್ತಾನದ ಗಡಿಯಾಚೆಗಿನ ಭಯೋತ್ಪಾದನೆಯ ತೀವ್ರ ಟೀಕಾಕಾರರಾಗಿದ್ದಾರೆ. ಈ ವರ್ಷದ ಫೆಬ್ರವರಿಯಲ್ಲಿ, ಗಡಿಯಾಚೆಗಿನ ಭಯೋತ್ಪಾದನೆಯ ಸಮಸ್ಯೆ ಮುಗಿಯುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ಸಂಬಂಧ ಬೇಡ. ಎಲ್ಲಕ್ಕಿಂತ ಭಾರತೀಯ ಸೈನಿಕರ ಪ್ರಾಣ ಮುಖ್ಯ ಎಂದು ಅವರು ಹೇಳಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ