ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ದೂರು ದಾಖಲಿಸಿದ ಮಂಗಳೂರು ಜಿಲ್ಲಾಧಿಕಾರಿ

posted in: ರಾಜ್ಯ | 0

ಮಂಗಳೂರು: ಮಂಗಳೂರು: ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತ್ ಅವರು ಜಿಲ್ಲಾಧಿಕಾರಿಗಳ ವಿರುದ್ಧ ಬೆದರಿಕೆ ಹಾಗೂ ಸರಕಾರಿ ಅಧಿಕಾರಿಗಳ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಬುಧವಾರ ದೂರು ದಾಖಲಿಸಿದ್ದಾರೆ.
ನಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ನ.21ರಂದು ಕಾವಳಮುಡೂರು ಗ್ರಾಮದ ಕಾರಿಂಜ ರಥಬೀದಿಯಲ್ಲಿ ನಡೆದ ಜನಜಾಗೃತಿ ಸಮಾವೇಶದಲ್ಲಿ ಸಂಘಟನೆಯ ಪ್ರಾಂತ ಕಾರ್ಯದರ್ಶಿ ಜಗದೀಶ್ ಕಾರಂತ್ ಮಾತನಾಡಿ, ಗಣಿಗಾರಿಕೆ ನಿಲ್ಲಿಸಲು ಡಿಸೆಂಬರ್ 21ರ ವರೆಗೆ ಗಡುವು ನೀಡಿದ್ದೇವೆ. ಕಾರಿಂಜೇಶ್ವರ ದೇವಸ್ಥಾನದ ಸುತ್ತ ಗಾಣಿಗಾರಿಕೆ ಚಟುವಟಿಕೆಗಳು ನಿಲ್ಲಬೇಕು. ಇಲ್ಲದಿದ್ದಲ್ಲಿ ಡಿಸೆಂಬರ್ 21 ರಂದು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ದ.ಕ.ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಕೊರಳಪಟ್ಟಿ ಹಿಡಿಯಲು ಸಿದ್ದರಾಗಿದ್ದೇವೆ ಎಂದು ಹೇಳಿದ್ದನ್ನು ಆಧರಿಸಿ ದೂರು ನೀಡಲಾಗಿದೆ.

 

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ