ಇಂಗ್ಲಿಷ್ ಕಾಲುವೆ ದಾಟುವಾಗ ದುರಂತ: ಬೋಟ್ ಮಗುಚಿ 31 ವಲಸಿಗರು ಸಾವು

ಪ್ಯಾರಿಸ್: ಅಪಾಯಕಾರಿ ಇಂಗ್ಲಿಷ್‌ ಕಾಲುವೆಯಲ್ಲಿ ವಲಸಿಗರ ಬೋಟ್ ಮಗುಚಿದ ಪರಿಣಾಮ ಸುಮಾರು 31ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಬ್ರಿಟನ್‌ಗೆ ತೆರಳುತ್ತಿದ್ದ ಬೋಟ್ ನಲ್ಲಿ 34 ಮಂದಿ ಇದ್ದರು ಎಂದು ನಂಬಲಾಗಿದೆ. ಇದು ಅತ್ಯಂತ ದೊಡ್ಡ ವಲಸಿಗರ ದುರಂತ ಎಂದು ಫ್ರಾನ್ಸ್ ಆಂತರಿಕ ಸಚಿವ ಜೆರಾಲ್ಡ್ ಡರ್ಮನಿನ್ ಹೇಳಿದ್ದಾರೆ. ಅಧಿಕಾರಿಗಳು 31 ಶವಗಳನ್ನು … Continued

ಇಂಟರ್ಪೋಲ್ ಸಮಿತಿಗೆ ಭಾರತದ ಸಿಬಿಐ ವಿಶೇಷ ನಿರ್ದೇಶಕ ಪ್ರವೀಣ್ ಸಿನ್ಹಾ ಆಯ್ಕೆ

ನವದೆಹಲಿ: ಇಂಟರ್‌ಪೋಲ್ ಗುರುವಾರ ತನ್ನ ಕಾರ್ಯಕಾರಿ ಸಮಿತಿಯಲ್ಲಿ ಏಷ್ಯಾದ ಪ್ರತಿನಿಧಿಯಾಗಿ ಭಾರತದ ಪ್ರವೀಣ್ ಸಿನ್ಹಾ ಅವರನ್ನು ಆಯ್ಕೆ ಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರೀಯ ತನಿಖಾ ದಳದ ವಿಶೇಷ ನಿರ್ದೇಶಕ ಪ್ರವೀಣ್ ಸಿನ್ಹಾ ಅವರು ಚೀನಾ, ಸಿಂಗಾಪುರ್, ರಿಪಬ್ಲಿಕ್ ಆಫ್ ಕೊರಿಯಾ ಮತ್ತು ಜೋರ್ಡಾನ್‌ನಿಂದ ಎರಡು ಹುದ್ದೆಗಳಿಗೆ ಸ್ಪರ್ಧಿಸುವ ಇತರ ನಾಲ್ಕು ಸ್ಪರ್ಧಿಗಳ ವಿರುದ್ಧ … Continued

ತಪ್ಪಾಗಿದೆ, ಯಾವುದೇ ಧರ್ಮ, ಸಮಾಜ ಜಾತಿ ನಿಂದಿಸುವ ಉದ್ದೇಶ ನನ್ನದಲ್ಲ: ಹಂಸಲೇಖ

posted in: ರಾಜ್ಯ | 0

ಬೆಂಗಳೂರು: ನನ್ನ ಹೇಳಿಕೆಯಿಂದ ತಪ್ಪಾಗಿದೆ. ಯಾವುದೇ ಧರ್ಮ, ಸಮಾಜ ನಿಂದಿಸುವ ಉದ್ದೇಶ ನನ್ನದಲ್ಲ. ಈ ಘಟನೆಯಿಂದ ನನಗೆ ತುಂಬಾ ನೋವಾಗಿದೆ ಎಂದು ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರವಾದ ರೀತಿಯಲ್ಲಿ ಮಾತನಾಡಿದ್ದ ಹಂಸಲೇಖ ಬಸವನಗುಡಿ ಠಾಣೆಗೆ ಹಾಜರಾಗಿ ಹೇಳಿದ್ದಾರೆ. ಎರಡು ಬಾರಿ ಬಾರಿ ನೋಟಿಸ್ ಕೊಟ್ಟ ನಂತರ ಗುರುವಾರ ತಮ್ಮ ವಕೀಲ ದ್ವಾರಕನಾಥ ಅವರೊಂದಿಗೆ ಬಸವನಗುಡಿ ಪೊಲೀಸ್ … Continued

ಕಾರವಾರ: ತಂದೆಗೆ ಅಂತ್ಯ ಸಂಸ್ಕಾರ ನೆರವೇರಿಸಿದ ಮಗಳು..!

posted in: ರಾಜ್ಯ | 0

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಂದೆಯ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ ವಿದ್ಯಮಾನ ವರದಿಯಾಗಿದೆ. ಕಾರವಾರ ತಾಲೂಕಿನಲ್ಲಿ ಮಹಿಳೆಯೋರ್ವಳು ತನ್ನ ತಂದೆಗೇ ತಾನೇ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿ ಅಗ್ನಿಸ್ಪರ್ಶ ಮಾಡಿ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ತಾಲೂಕಿನ ಮುಡಗೇರಿಯಲ್ಲಿ ಇದು ನಡೆದಿದ್ದು, . ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆ ತಂದೆಗೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಹಿಂದೂ ಧರ್ಮದಲ್ಲಿ … Continued

ಏಷ್ಯಾದ ಅತಿದೊಡ್ಡ ವಿಮಾನ ನಿಲ್ದಾಣಕ್ಕೆ ಮೋದಿ ಶಂಕು ಸ್ಥಾಪನೆ.. ಇದಕ್ಕಿದೆ ಹಲವು ವಿಶೇಷತೆ

ಲಕ್ನೋ: ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಜೇವರ್‌ನಲ್ಲಿ ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಎನ್‌ಐಎ) ಪ್ರಧಾನಿ ನರೇಂದ್ರ ಮೋದಿ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು. 5,730 ಕೋಟಿ ರೂ. ವೆಚ್ಚದ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಏಷ್ಯಾದಲ್ಲಿಯೇ ಅತಿ ದೊಡ್ಡ ಮತ್ತು ಭಾರತದ ಮೊದಲ ನಿವ್ವಳ ಶೂನ್ಯ ಹೊರಸೂಸುವಿಕೆ ವಿಮಾನ ನಿಲ್ದಾಣವಾಗಿದೆ. ಶಂಕು ಸ್ಥಾಪನೆ ಬಳಿಕ … Continued

ಸಚಿವ ಗೋವಿಂದ ಕಾರಜೋಳ ಕಾರು ಡಿಕಿ: ಬೈಕ್‌ ಸವಾರನಿಗೆ ಗಾಯ

posted in: ರಾಜ್ಯ | 0

ಬೆಂಗಳೂರು: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು (ಗುರುವಾರ) ನಡೆದಿದೆ. ನೆಲಮಂಗಲದ ಮಹಿಮಾಪುರ ಗೇಟ್ ಬಳಿ ಅಪಘಾತವಾಗಿದ್ದು ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್‌ ಸವಾರನಿಗೆ ಗುದ್ದಿದ ಪರಿಣಾಮ ಬೈಕ್‌ ಸವಾರನ ಕಾಲು ಮುರಿದಿದೆ … Continued

ಸುಲಿಗೆ ಪ್ರಕರಣ: 6 ಗಂಟೆಗಳ ಕಾಲ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್ ಬೀರ್ ಸಿಂಗ್ ವಿಚಾರಣೆ

ಮುಂಬೈ: ಸುಲಿಗೆ ಪ್ರಕರಣದಲ್ಲಿ ಮುಂಬೈನ ಮಾಜಿ ಪೊಲೀಸ್‌ ಆಯುಕ್ತ ಪರಮ್ ಬೀರ್ ಸಿಂಗ್ ಅವರನ್ನು ತನಿಖಾ ಅಧಿಕಾರಿಗಳು ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದರು. ತನಿಖಾ ಸಂಸ್ಥೆ ಸಿಂಗ್ ಅವರಿಗೆ ನೋಟಿಸ್ ನೀಡಿದ್ದು, ಅಗತ್ಯವಿದ್ದಾಗ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂದು ಸೂಚಿಸಿದೆ. ಮಾಜಿ ಉನ್ನತ ಪೊಲೀಸ್ ತನಿಖೆಗೆ ಸಹಕರಿಸಿದರು ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಎಲ್ಲಾ … Continued

ಭಯೋತ್ಪಾದನಾ ಚಟುವಟಿಕೆಗಳಿಗೆ ಹಣ: ಮಂಗಳೂರು ದಂಪತಿಗೆ 10 ವರ್ಷ ಕಠಿಣ ಶಿಕ್ಷೆ

ರಾಯಪುರ: ಛತ್ತೀಸ್‌ಗಢದ ರಾಯ್‌ಪುರದ ನ್ಯಾಯಾಲಯವು ಬುಧವಾರ ನಿಷೇಧಿತ ಗುಂಪುಗಳಾದ ಸಿಮಿ ಮತ್ತು ಇಂಡಿಯನ್ ಮುಜಾಹಿದ್ದೀನ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಮೂಲದ ದಂಪತಿ ಸೇರಿದಂತೆ ನಾಲ್ವರಿಗೆ ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವಿನಿಯೋಗಿಸಿ, ಅವರ ಉದ್ದೇಶಿತ ಕೃತ್ಯಕ್ಕೆ ಸಹಾಯ ಮಾಡಿದ್ದಕ್ಕಾಗಿ 10 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು (ಆರ್‌ಐ) ವಿಧಿಸಿದೆ. ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿದ ಆರೋಪದಡಿ … Continued

ಎದೆನೋವು ಕಾಣಿಸಿಕೊಂಡ ನಂತರ ಪುಣೆ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ

ಪುಣೆ: ಎದೆನೋವು ಕಾಣಸಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಗುರುವಾರ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ನಿಗಾದಲ್ಲಿ ಇರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅವರು ರೂಬಿ ಹಾಲ್ ಕ್ಲಿನಿಕ್‌ನಲ್ಲಿ ಆಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದೆ. ಆದಾಗ್ಯೂ, … Continued

ಸಮೀರ್ ವಾಂಖೆಡೆ ಕುಟುಂಬದ ವಿರುದ್ಧ ಟ್ವೀಟ್, ಸಾರ್ವಜನಿಕ ಹೇಳಿಕೆ ನೀಡುವುದಿಲ್ಲ: ಬಾಂಬೆ ಹೈಕೋರ್ಟಿಗೆ ತಿಳಿಸಿದ ನವಾಬ್ ಮಲಿಕ್

ಮುಂಬೈ: ಮುಂದಿನ ಡಿಸೆಂಬರ್ 9ರ ವಿಚಾರಣೆ ವರೆಗೆ ಎನ್‌ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖೆಡೆ ಅವರ ವಿರುದ್ಧ ಮತ್ತು ಅವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಟ್ವೀಟ್‌ಗಳನ್ನು ಪೋಸ್ಟ್ ಮಾಡುವುದಿಲ್ಲ ಹಾಗೂ ಯಾವುದೇ ಸಾರ್ವಜನಿಕ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಗುರುವಾರ ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಮಲಿಕ್ ಅವರು ವಾಂಖೆಡೆ ವಿರುದ್ಧ … Continued