ಎದೆನೋವು ಕಾಣಿಸಿಕೊಂಡ ನಂತರ ಪುಣೆ ಆಸ್ಪತ್ರೆಗೆ ದಾಖಲಾದ ಅಣ್ಣಾ ಹಜಾರೆ

ಪುಣೆ: ಎದೆನೋವು ಕಾಣಸಿಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಗುರುವಾರ ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ನಿಗಾದಲ್ಲಿ ಇರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಅವರು ರೂಬಿ ಹಾಲ್ ಕ್ಲಿನಿಕ್‌ನಲ್ಲಿ ಆಂಜಿಯೋಗ್ರಫಿಗೆ ಒಳಗಾಗುವ ಸಾಧ್ಯತೆಯಿದೆ. ಆದಾಗ್ಯೂ, ಈ ವಿಷಯದ ಬಗ್ಗೆ ಅಹ್ಮದ್‌ನಗರ ಜಿಲ್ಲೆಯ ಅವರ ಗ್ರಾಮ ರಾಲೇಗನ್ ಸಿದ್ಧಿ ಅಥವಾ ಆಸ್ಪತ್ರೆಯಿಂದ ಯಾವುದೇ ಔಪಚಾರಿಕ ದೃಢೀಕರಣವಿಲ್ಲ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಣ್ಣಾ ಹಜಾರೆ ಅವರನ್ನು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ನಿಗಾದಲ್ಲಿ ಇರಿಸಲಾಗಿದೆ ಮತ್ತು ಆರೋಗ್ಯ ಸ್ಥಿರವಾಗಿದೆ ಎಂದು ರೂಬಿ ಹಾಲ್ ಕ್ಲಿನಿಕ್‌ನ ವೈದ್ಯಕೀಯ ಅಧೀಕ್ಷಕ ಡಾ ಅವಧೂತ್ ಬೋಡಮ್‌ವಾಡ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಎದೆನೋವು ಮತ್ತು ದೌರ್ಬಲ್ಯದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಜಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಧ್ಯಮ ವರದಿಗಳು ಸೂಚಿಸಿವೆ. ಅವರಿಗೆ ಆಂಜಿಯೋಗ್ರಫಿ ಮಾಡಲಾಗಿದ್ದು, ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ.
ಈ ನಡುವೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. “ಅವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಉದ್ಧವ್ ಠಾಕ್ರೆ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ನಂತರ ಹೇಳಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ