ಕೇಜ್ರಿವಾಲ್ ಬಗ್ಗೆ ತಿರುಚಿದ ವಿಡಿಯೊ ಹಂಚಿಕೊಂಡ ಪ್ರಕರಣ: ಸಂಬಿತ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ದೆಹಲಿ ಕೋರ್ಟ್‌

ಕೇಜ್ರಿವಾಲ್ ಬಗ್ಗೆ ತಿರುಚಿದ ವಿಡಿಯೊ ಹಂಚಿಕೊಂಡ ಸಂಬಿತ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿದ ದೆಹಲಿ ಕೋರ್ಟ್‌
ನವದೆಹಲಿ: ದೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೃಷಿ ಕಾನೂನನ್ನು ಬೆಂಬಲಿಸುವ ತಿರುಚಿದ ವಿಡಿಯೊವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕ ಸಂಬಿತ್ ಪಾತ್ರಾ ವಿರುದ್ಧ ಎಫ್‌ಐಆರ್ ದಾಖಲಿಸಲು ದೆಹಲಿ ನ್ಯಾಯಾಲಯವು ಪೊಲೀಸರಿಗೆ ನಿರ್ದೇಶನ ನೀಡಿದೆ.
. ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅತಿಶಿ ಅವರ ಅರ್ಜಿಯನ್ನು ಅನುಮತಿಸುವ ಸಂದರ್ಭದಲ್ಲಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಿಷಭ್ ಕಪೂರ್ ಅವರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಮತ್ತು ಬಿಜೆಪಿ ವಕ್ತಾರರ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ದೆಹಲಿ ಪೊಲೀಸರಿಗೆ ಸೂಚಿಸಿದ್ದಾರೆ.
ಇದು ರಾಷ್ಟ್ರದಾದ್ಯಂತ ಗಲಭೆಯಂತಹ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಹೇಳಿದ್ದಾರೆರೈತ ಕಾನೂನುಗಳಿಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷ ತೆಗೆದುಕೊಂಡಿರುವ ನಿಲುವಿಗೆ ಸಂಪೂರ್ಣವಾಗಿ ವಿರುದ್ಧವಾದ ಹೇಳಿಕೆಗಳನ್ನು ವಿಡಿಯೊ ಒಳಗೊಂಡಿದೆ ಮತ್ತು ರೈತರ ಮನಸ್ಸಿನಲ್ಲಿ ಅಸಮಾಧಾನ ಮತ್ತು ಅತೃಪ್ತಿಯನ್ನು ಉಂಟುಮಾಡಿದೆ ಎಂದು ಅತಿಶಿ ಅವರು ಪತ್ರಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ರೈತರು ಪ್ರತಿರೋಧ ಒಡ್ಡಿದ್ದ ಮೂರು ಕೃಷಿ ಕಾನೂನುಗಳನ್ನು ದೆಹಲಿ ಮುಖ್ಯಮಂತ್ರಿ ಬೆಂಬಲಿಸುತ್ತಿರುವಂತೆ ವಿಡಿಯೊದಲ್ಲಿ ಬಿಂಬಿಸಲಾಗಿತ್ತು.
40 ನಿಮಿಷಗಳ ಕಾಲಾವಧಿಯ ವಿಡಿಯೊವನ್ನು ಎಚ್ಚರಿಕೆಯಿಂದ ಪರಿಶೀಲಿಸಿದಾಗ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ಕೇಜ್ರಿವಾಲ್‌ ಉತ್ತರಿಸಿದ್ದಾರೆ. ಆದರೆ ಪಾತ್ರಾ ಹಂಚಿಕೊಂಡ 18 ಸೆಕೆಂಡುಗಳ ವಿಡಿಯೊದಲ್ಲಿ ಕೇಜ್ರಿವಾಲ್‌ ಅವರೇ ಕೃಷಿ ಕಾಯಿದೆಯನ್ನು ಬೆಂಬಲಿಸುತ್ತಿರುವಂತೆ ತಿರುಚಲಾಗಿತ್ತು ಎಂಬುದನ್ನು ನ್ಯಾಯಾಲಯ ಗಮನಿಸಿದೆ.
ಸೂಕ್ತ ಸೆಕ್ಷನ್‌ಗಳ ಅಡಿ ಎಫ್‌ಐಆರ್‌ ದಾಖಲಿಸಿಕೊಂಡು ಘಟನೆಯ ಕುರಿತು ತನಿಖೆ ಆರಂಭಿಸಬೇಕು ಎಂದು ಠಾಣಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. ಫೆಬ್ರವರಿ 3, 2022ರೊಳಗೆ ದೆಹಲಿ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ಸ್ಥಿತಿಗತಿ ವರದಿ ಸಲ್ಲಿಸಬೇಕೆಂದು ಅದು ಹೇಳಿದೆ.

 

,

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ